ವಿಜಯಪುರ: ಹೈದರಾಬಾದ್ ನಿಂದ ಹುಬ್ಬಳ್ಳಿಗೆ ಕಾರೊಂದರಲ್ಲಿ ₹2,93,50,000 ನಗದನ್ನು ಸಾಗಿಸುತ್ತಿರುವುದನ್ನು ವಿಜಯಪುರ ಸಿಇಎನ್ ಕ್ರೈಂ ಪೊಲೀಸರು ಸೋಮವಾರ ರಾತ್ರಿ ವಶಪಡಿಸಿಕೊಂಡಿದ್ದಾರೆ.
ಹಣವನ್ನು ಸಾಗಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಬಂದ ಹಿನ್ನೆಲೆಯಲ್ಲಿ ಸಿಇಎನ್ ಪೊಲೀಸ್ ಠಾಣೆಯ ಪೊಲೀಸ್ ಇನ್ ಸ್ಪೆಕ್ಟರ್ ಸುನೀಲ್ ಕುಮಾರ್ ನಂದೇಶ್ವರ ಮತ್ತು ಸಿಬ್ಬಂದಿ ನಗರದ ಸಿಂದಗಿ ಬೈಪಾಸ್ ನಲ್ಲಿ ಕಾರನ್ನು ಅಡ್ಡಗಟ್ಟಿ ತಪಾಸಣೆ ಮಾಡಿದಾಗ ನಗದು ಪತ್ತೆಯಾಗಿದೆ. ಸೂಕ್ತ ದಾಖಲೆಯನ್ನು ಒದಗಿಸದ ಹಿನ್ನೆಲೆಯಲ್ಲಿ ಹಣವನ್ನು ವಶಕ್ಕೆ ಪಡೆದು, ಆರೋಪಿಗಳನ್ನು ವಿಚಾರಣೆಗೆ ಒಳಪಡಿಸಲಾಗಿದೆ