ಪೊಲೀಸ್ ಇಲಾಖೆಯ ಆಧುನೀಕರಣಕ್ಕೆ 20 ಕೋಟಿ ರೂಪಾಯಿಯನ್ನು ಬಿಡುಗಡೆ: ಬಸವರಾಜ ಬೊಮ್ಮಾಯಿ

Prasthutha|

ಬೆಂಗಳೂರು: ರಾಜ್ಯದಲ್ಲಿ ಪೊಲೀಸ್ ಮತ್ತು ಅಗ್ನಿಶಾಮಕ ಇಲಾಖೆಯ ಆಧುನೀಕರಣಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಹೆಚ್ಚಿನ ಆರ್ಥಿಕ ಸಹಕಾರ ನೀಡುತ್ತಿದ್ದಾರೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

- Advertisement -


ಬೆಂಗಳೂರಿನ ವಿಧಾನಸೌಧ ಮುಂಭಾಗ ಅಗ್ನಿಶಾಮಕ ಹಾಗೂ ಗೃಹ ರಕ್ಷಕ ದಳದ ಸಿಬ್ಬಂದಿಗೆ ಮುಖ್ಯಮಂತ್ರಿ ಪದಕ ಪ್ರದಾನ ಸಮಾರಂಭದಲ್ಲಿ ಅವರು ಮಾತನಾಡಿದರು.


ಪೊಲೀಸ್ ಇಲಾಖೆಯ ಆಧುನೀಕರಣಕ್ಕೆ 20 ಕೋಟಿ ರೂಪಾಯಿಯನ್ನು ಬಿಡುಗಡೆ ಮಾಡಲಾಗಿದೆ. ಹೊಸ ಅಗ್ನಿಶಾಮಕ ಠಾಣೆ ಮತ್ತು ಸಿಬ್ಬಂದಿಗೆ ಸೌಲಭ್ಯ ಒದಗಿಸಿಕೊಡಲು ಪ್ರಸಕ್ತ ಸಾಲಿನ ಬಜೆಟ್‌ನಲ್ಲಿ 300 ಕೋಟಿ ರೂಪಾಯಿ ನಿಗದಿಪಡಿಸಲಾಗಿದೆ ಎಂದರು.ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಬಹಳ ದೊಡ್ಡ ಮಟ್ಟದ ಕೊಡುಗೆ ನೀಡುತ್ತಿರುವ ಹೋಮ್ ಗಾರ್ಡ್ ಗಳಿಗೆ ಹೆಚ್ಚಿನ ಸವಲತ್ತು ಕಲ್ಪಿಸಿಕೊಡಲು ಸರ್ಕಾರ ಬದ್ಧವಾಗಿದೆ ಎಂದು ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.

Join Whatsapp