ಮುರುಘಾ ಸ್ವಾಮಿಯ ಲೈಂಗಿಕ ದೌರ್ಜನ್ಯ ಪ್ರಕರಣದಿಂದ ಹಿಂದೆ ಸರಿಯಲು 3 ಕೋಟಿ ರೂ. ಆಮಿಷ: ಎಂ.ಎಲ್‌. ಪರಶುರಾಂ

Prasthutha|

ಮೈಸೂರು: ಮುರುಘಾ ಮಠದ ಸ್ವಾಮೀಜಿಯ ಲೈಂಗಿಕ ದೌರ್ಜನ್ಯದ ಆರೋಪ ಪ್ರಕರಣದಿಂದ ಹಿಂದೆ ಸರಿಯುವಂತೆ ಹೇಳಿ ₹ 3 ಕೋಟಿ ಆಮಿಷ ಒಡ್ಡಲಾಗಿತ್ತು ಎಂದು ಒಡನಾಡಿ ಸಂಸ್ಥೆ ನಿರ್ದೇಶಕ ಎಂ.ಎಲ್‌. ಪರಶುರಾಂ ಹೇಳಿದ್ದಾರೆ.

- Advertisement -

ನಗರದ ಮಹಾರಾಣಿ ವಿಜ್ಞಾನ ಕಾಲೇಜಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಂತ್ರಸ್ತ ಮಕ್ಕಳು ಒಂದೆಡೆ ಅಳುತ್ತಿದ್ದರೆ ಇನ್ನೊಂದೆಡೆ ಹಣದ ಆಯ್ಕೆಯನ್ನು ಮುಂದಿಟ್ಟ ನಾಚಿಕೆಯಿಲ್ಲದ ಮಂತ್ರಿಯೊಬ್ಬರು ಸ್ವಾಮೀಜಿ ಅವರನ್ನು ಬಿಟ್ಟು ಬಿಡುವಂತೆ ಹೇಳಿದ್ದಾರೆ ಎಂದು ತಿಳಿಸಿದರು.


3 ರಿಂದ 16 ವರ್ಷದವರೆಗಿನ ಸುಮಾರು 23 ಹೆಣ್ಣು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಮುರುಘಾ ಸ್ವಾಮೀಜಿ 25 ವರ್ಷಗಳಿಂದ ಇಂತಹ ಕೃತ್ಯ ಎಸಗುತ್ತಾ ಬಂದಿದ್ದಾರೆ. ಸಣ್ಣ ಹೆಣ್ಣು ಮಗುವೊಂದು ನಮ್ಮ ಬಳಿಗೆ ಬಂದು, ಸ್ವಾಮೀಜಿ ಕಚ್ಚಿದ್ದ ತನ್ನ ಎದೆಭಾಗವನ್ನು ತೋರಿಸಿದಾಗ, ಜವಾಬ್ದಾರಿಯುತ ಸ್ಥಾನದಲ್ಲಿ ನಿಂತು ಮೌನ ವಹಿಸುವುದಾದರೂ ಹೇಗೆ? ಸತ್ಯ– ನ್ಯಾಯಕ್ಕಾಗಿ ಮಕ್ಕಳ ಪರ ಜೀವ ಇರುವವರೆಗೂ ಹೋರಾಡುತ್ತೇವೆ ಎಂದು ಪರಶುರಾಂ ಹೇಳಿದರು.

Join Whatsapp