Home ಟಾಪ್ ಸುದ್ದಿಗಳು ವಿಟ್ಲ | ED ಅಧಿಕಾರಿಗಳಂತೆ ನಟಿಸಿ 30 ಲಕ್ಷ ದರೋಡೆ: ಬೀಡಿ ಮಾಲಕರ ಮನೆಗೆ ಸ್ಪೀಕರ್...

ವಿಟ್ಲ | ED ಅಧಿಕಾರಿಗಳಂತೆ ನಟಿಸಿ 30 ಲಕ್ಷ ದರೋಡೆ: ಬೀಡಿ ಮಾಲಕರ ಮನೆಗೆ ಸ್ಪೀಕರ್ ಯು.ಟಿ.ಖಾದರ್ ಭೇಟಿ

ವಿಟ್ಲ: ED ಅಧಿಕಾರಿಗಳಂತೆ ನಟಿಸಿ 30 ಲ.ರೂ. ದರೋಡೆಯಾಗಿರುವ ಬೋಳಂತೂರು ನಾರ್ಶದ ಸಿಂಗಾರಿ ಬೀಡಿ ಮಾಲಕ ಸುಲೈಮಾನ್ ಹಾಜಿ ಅವರ ಮನೆಗೆ ಸ್ಪೀಕರ್ ಯು.ಟಿ. ಖಾದರ್, ದ.ಕ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮತ್ತು ತಂಡ ಬುಧವಾರ ಬೆಳಗ್ಗೆ ಭೇಟಿ ನೀಡಿ ತನಿಖೆಯ ಪ್ರಗತಿ ಪರಿಶೀಲನೆ ಮತ್ತು ಕಾರ್ಯವಿಧಾನದ ಕುರಿತು ಮನೆಯವರ ಜೊತೆಗೆ ಸಮಾಲೋಚನೆ ನಡೆಸಿದರು.


ಈ ವೇಳೆ ಮಾತನಾಡಿದ ಯು.ಟಿ.ಖಾದರ್, ಇಡಿ ಅಧಿಕಾರಿಗಳ ಸೋಗಿನಲ್ಲಿ ಹಣ ದರೋಡೆಯಾಗಿರುವ ಬಂಟ್ವಾಳ ತಾಲೂಕಿನ ಬೋಳಂತೂರು ನಾರ್ಶದ ಸಿಂಗಾರಿ ಬೀಡಿ ಮಾಲಕ ಸುಲೈಮಾನ್ ಹಾಜಿ ಅವರ ಮನೆಗೆ ಭೇಟಿ ನೀಡಿ, ದ.ಕ. ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಮತ್ತು ತಂಡದ ಜೊತೆಗೆ ತನಿಖೆಯ ಪ್ರಗತಿ ಪರಿಶೀಲನೆ ಮತ್ತು ಕಾರ್ಯವಿಧಾನದ ಕುರಿತು ಮನೆಯವರ ಜೊತೆಗೆ ಸಮಾಲೋಚನೆ ನಡೆಸಿದ್ದೇನೆ. ತನಿಖೆ ಇನ್ನಷ್ಟು ತೀವ್ರಗೊಳಿಸಲು ಪೊಲೀಸ್ ಇಲಾಖೆಯು ಆಧುನಿಕ ತಂತ್ರಜ್ಞಾನದೊಂದಿಗೆ ಉನ್ನತ ಮಟ್ಟದ ತನಿಖೆ ನಡೆಸುತ್ತಿದೆ. ಈಗಾಗಲೇ ಡಿವೈಎಸ್ಪಿ ನೇತೃತ್ವದ 4 ತಂಡಗಳನ್ನು ರಚಿಸಲಾಗಿದೆ ಎಂದು ಹೇಳಿದ್ದಾರೆ.

ಇ.ಡಿ ದಾಳಿ ಹೆಸರಿನಲ್ಲಿ ದರೋಡೆ: ವಶಕ್ಕೆ ಪಡೆದ ಮೊಬೈಲ್‌ ಮನೆಯಲ್ಲೇ ಪತ್ತೆ

ಇಡಿ ಅಧಿಕಾರಿಗಳು ಎಂದು ಹೇಳಿಕೊಂಡು ಬಂದವರು, ಮೊದಲು ಕುಟುಂಬ ಸದಸ್ಯರ 5 ಮೊಬೈಲ್‌ಗಳನ್ನು ವಶಕ್ಕೆ ಪಡೆದುಕೊಂಡಿದ್ದರು. ಅವರು ವಾಪಾಸ್‌ ಹೋಗುವಾಗ ಮೊಬೈಲ್‌ಗಳನ್ನು ಅವರ ಜತೆಯಲ್ಲೇ ತೆಗೆದುಕೊಂಡು ಹೋಗಿರಬಹುದು ಎಂದು ಕುಟುಂಬ ಸದಸ್ಯರು ಭಾವಿಸಿದ್ದರು. ಆದರೆ, ಮೊಬೈಲ್‌ಗಳು ಮೂರನೆಯ ಮಹಡಿಯಲ್ಲಿ ಪತ್ತೆಯಾಗಿವೆ. ಅದೇ ಕೋಣೆಯಲ್ಲಿ ಮೊಬೈಲ್‌ನಿಂದ ಸಿಮ್‌ ತೆಗೆದು ತುಂಡರಿಸಿ ಅಲ್ಲೇ ಎಸೆದಿದ್ದಾರೆ.

ಸುಲೈಮಾನ್ ಹಾಜಿ ಅವರು ಜಾಗ ಮಾರಾಟದಿಂದ ಪಡೆದ ಹಣದ ಬಗ್ಗೆ ಯಾರಿಗೆಲ್ಲಾ ತಿಳಿದಿತ್ತು ಎನ್ನುವುದರ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಜಾಗ ಮಾರಾಟದಿಂದ ಬಂದ ಹಣದ ಬಗ್ಗೆ ನಿಖರ ಮಾಹಿತಿ ಇದ್ದವರೇ ಈ ಕೃತ್ಯ ಎಸಗಿರುವ ಸಾಧ್ಯತೆ ಇದೆ ಎನ್ನುತ್ತವೆ ಮೂಲಗಳು.

Join Whatsapp
Exit mobile version