ತುಮಕೂರು: 350 ಕೋಟಿ ರೂ. ವೆಚ್ಚದಲ್ಲಿ 5 ಮೇಲ್ಸೇತುವೆ ನಿರ್ಮಾಣಕ್ಕೆ ರೈಲ್ವೆ ಸಚಿವಾಲಯ ಅನುಮೋದನೆ

Prasthutha|

ತುಮಕೂರು: ತುಮಕೂರಿನಲ್ಲಿ 350 ಕೋಟಿ ರೂ. ವೆಚ್ಚದಲ್ಲಿ 5 ಮೇಲ್ಸೇತುವೆ ನಿರ್ಮಾಣಕ್ಕೆ ರೇಲ್ವೆ ಸಚಿವಾಲಯದಿಂದ ಅನುಮೋದನೆ ನೀಡಿದೆ ಎಂದು ರೈಲ್ವೆ ಇಲಾಖೆ ರಾಜ್ಯ ಖಾತೆ ಸಚಿವ ವಿ.ಸೋಮಣ್ಣಮಾಹಿತಿ ನೀಡಿದ್ದಾರೆ.

- Advertisement -

ದೆಹಲಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕ್ಯಾತ್ಸಂದ್ರ ರೈಲ್ವೆ ಸ್ಟೇಷನ್ ಮೈದಾಳ ಗೇಟ್, ಬಡ್ಡಿಹಳ್ಳಿ ಗೇಟ್, ಬಟ್ಟವಾಡಿ, ಹಿರಿಯೂರು, ತುಮಕೂರು-ಮೈಸೂರು ಗೇಟ್​​ ಫ್ಲೈಓವರ್​​ ನಿರ್ಮಾಣದ ವೆಚ್ಚವನ್ನು ರೈಲ್ವೆ ಇಲಾಖೆ ಭರಿಸಲಿದೆ ಎಂದಿದ್ದಾರೆ.

ತುಮಕೂರು-ರಾಯದುರ್ಗ ಮತ್ತು ತುಮಕೂರು-ದಾವಣಗೆರೆ ರೈಲು ಯೋಜನೆ 2026ರ ಡಿಸೆಂಬರ್ ವೇಳೆಗೆ ಪೂರ್ಣಗೊಳ್ಳಲಿದ್ದು ಶೀಘ್ರವಾಗಿ ಉದ್ಘಾಟಿಸಲಾಗುವುದು ಎಂದು ಇತ್ತೀಚೆಗೆ ವಿ. ಸೋಮಣ್ಣ ಹೇಳಿದ್ದರು. ತುಮಕೂರು-ರಾಯದುರ್ಗ ಹಾಗೂ ತುಮಕೂರು-ದಾವಣಗೆರೆ ರೈಲ್ವೆ ಯೋಜನೆಗೆ ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಳ್ಳುವ ಹಂತದಲ್ಲಿದೆ ಎಂದಿದ್ದರು.



Join Whatsapp