Home ಟಾಪ್ ಸುದ್ದಿಗಳು 40 ಲಕ್ಷ ರೂ. ಲಂಚ: ಕೆಎಸ್‌’ಡಿಎಲ್ ಅಧ್ಯಕ್ಷ ಸ್ಥಾನಕ್ಕೆ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ರಾಜೀನಾಮೆ

40 ಲಕ್ಷ ರೂ. ಲಂಚ: ಕೆಎಸ್‌’ಡಿಎಲ್ ಅಧ್ಯಕ್ಷ ಸ್ಥಾನಕ್ಕೆ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ರಾಜೀನಾಮೆ

ಬೆಂಗಳೂರು: ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ದಾವಣಗೆರೆ ಜಿಲ್ಲೆಯ ಚನ್ನಗಿರಿಯ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರು ಕರ್ನಾಟಕ ಸೋಪ್ಸ್ ಅಂಡ್ ಡಿಟರ್ಜೆಂಟ್ಸ್ ಲಿಮಿಟೆಡ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.


ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರ ಪುತ್ರ ಪ್ರಶಾಂತ್ ಮಾಡಾಳ್ ಅವರ ಮನೆ ಮೇಲೆ ಲೋಕಾಯುಕ್ತದ ಭ್ರಷ್ಟಾಚಾರ ನಿಗ್ರಹ ದಳ -ರಾಜ್ಯದ ಒಂಬುಡ್ಸ್ ಮನ್ ದಾಳಿ ನಡೆಸಿದ್ದು, ಅಪಾರ ಪ್ರಮಾಣದ ಹಣದ ರಾಶಿ ಪತ್ತೆಯಾಗಿದೆ. ತಡರಾತ್ರಿಯವರೆಗೂ ಹುಡುಕಾಟ ನಡೆದಿದೆ. ಇದೀಗ ನಿಗಮ ಮಂಡಳಿಗೆ ಸಂಜೆಯೊಳಗೆ ರಾಜೀನಾಮೆ ನೀಡುವಂತೆ ಮುಖ್ಯಮಂತ್ರಿ ಬೊಮ್ಮಾಯಿ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರಿಗೆ ಸೂಚನೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಅವರು ರಾಜೀನಾಮೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.

Join Whatsapp
Exit mobile version