Home ಟಾಪ್ ಸುದ್ದಿಗಳು ಗೋಮಾಂಸವನ್ನು ವಿದೇಶಗಳಿಗೆ ರಫ್ತು ಮಾಡುವ ಮೂಲಕ 40 ಸಾವಿರ ಕೋಟಿ ವಹಿವಾಟು: ಅಗ್ನಿ ಶ್ರೀಧರ್

ಗೋಮಾಂಸವನ್ನು ವಿದೇಶಗಳಿಗೆ ರಫ್ತು ಮಾಡುವ ಮೂಲಕ 40 ಸಾವಿರ ಕೋಟಿ ವಹಿವಾಟು: ಅಗ್ನಿ ಶ್ರೀಧರ್

ಬೆಂಗಳೂರು: ಜೈನ ಸಮುದಾಯದ ಕೆಲವರು ಗೋವಿನ ಮಾಂಸವನ್ನು ವಿದೇಶಗಳಿಗೆ ರಫ್ತು ಮಾಡುವ ಮೂಲಕ ವಾರ್ಷಿಕ 40 ಸಾವಿರ ಕೋಟಿ ವಹಿವಾಟು ನಡೆಸುತ್ತಿದ್ದಾರೆ ಎಂದು ರಾಷ್ಟ್ರೀಯ ದ್ರಾವಿಡ ಸಂಘದ ಅಧ್ಯಕ್ಷ ಅಗ್ನಿ ಶ್ರೀಧರ್ ಆರೋಪಿಸಿದ್ದಾರೆ.


ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಬುಧವಾರ ಮಾತನಾಡಿದ ಅವರು, ‘ಗೋವಿನ ಮಾಂಸ ರಫ್ತು ಮಾಡುವ ಉದ್ಯಮದಲ್ಲಿ ಈ ಹಿಂದೆ ಮುಸ್ಲಿಂ ಸಮುದಾಯವು ದೊಡ್ಡ ಪಾಲನ್ನು ಹೊಂದಿತ್ತು. ಮುಸ್ಲಿಮರನ್ನು ಈ ಉದ್ಯಮದಿಂದ ಹೊರಗಿಡಲು ಆರ್ ಎಸ್ ಎಸ್ ಮತ್ತು ಬಿಜೆಪಿ ಸರ್ಕಾರ ಗೋಹತ್ಯೆ ನಿಷೇಧ ಕಾನೂನು ಜಾರಿಗೊಳಿಸಿದೆ. ಈ ಹುನ್ನಾರದ ಹಿಂದೆ ಜೈನ ಸಮುದಾಯವಿದೆ’ ಎಂದು ದೂರಿದರು.


ದಲಿತರು, ಕ್ರಿಶ್ಚಿಯನ್ನರು ಹಸುವಿನ ಮಾಂಸವನ್ನು ಹೆಚ್ಚು ಸೇವಿಸುತ್ತಾರೆ. ಶ್ರೀಮಂತ ಮುಸ್ಲಿಮರು ಹಸುವಿನ ಮಾಂಸವನ್ನು ತಿನ್ನುವುದಿಲ್ಲ. ಆದರೆ, ಗೋಹತ್ಯೆಯ ವಿಷಯ ಮುನ್ನಲೆಗೆ ಬಂದಾಗಲೆಲ್ಲ ಇದನ್ನು ಮುಸ್ಲಿಮರ ಆಹಾರವೆಂಬಂತೆ ಬಿಂಬಿಸಲಾಗುತ್ತಿದೆ ಎಂದರು.

Join Whatsapp
Exit mobile version