ಮಂಡ್ಯ: 40 ಸಾವಿರ ಲಂಚ ಪಡೆಯುವ ವೇಳೆ ತಹಶಿಲ್ದಾರ್ ಲೋಕಾಯುಕ್ತ ಬಲೆಗೆ ಬಿದ್ದಿರುವಂತಹ ಘಟನೆ ಜಿಲ್ಲೆಯ ಪಾಂಡವಪುರದಲ್ಲಿ ನಡೆದಿದೆ.
ಸದ್ಯ ಲೋಕಾಯುಕ್ತ ಬಲೆಗೆ ಬಿದ್ದ ತಹಶೀಲ್ದಾರ್ ಸೌಮ್ಯಾರನ್ನು ಬಂಧಿಸಲಾಗಿದೆ. ಗ್ರಾಮಲೆಕ್ಕಿಗ ಮರಿಸ್ವಾಮಿ ಎನ್ನುವವರನ್ನು ಗುಮ್ಮನಹಳ್ಳಿಯಿಂದ ದೊಡ್ಡ ಮೊಮ್ಮನ ಹಳ್ಳಿಗೆ ವರ್ಗಾವಣೆ ಮಾಡಲು ಕಚೇರಿಯಲ್ಲಿ 40 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಇನ್ಸ್ಪೆಕ್ಟರ್ ಬ್ಯಾಟರಾಯಗೌಡ ನೇತೃತ್ವದಲ್ಲಿ ದಾಳಿ ಮಾಡಿ ಬಂಧಿಸಲಾಗಿದೆ.