ಗೃಹಲಕ್ಷ್ಮಿಗಾಗಿ 4600 ಕೋಟಿ ರೂ. ಬಿಡುಗಡೆ ಮಾಡಿದ ರಾಜ್ಯ ಸರ್ಕಾರ

Prasthutha|

ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಗಳಲ್ಲೊಂದಾದ ಗೃಹಲಕ್ಷ್ಮಿ ಯೋಜನೆಗೆ ರಕ್ಷಾ ಬಂಧನದ ದಿನ ಮೈಸೂರಿನಲ್ಲಿ ರಾಹುಲ್ ಗಾಂಧಿಯವರ ನೇತೃತ್ವದಲ್ಲಿ ಅದ್ಧೂರಿ ಚಾಲನೆ ಸಿಕ್ಕಿತ್ತು. ಆ ಬಳಿಕ ಅನೇಕ ಮಹಿಳೆಯರ ಖಾತೆಗೆ 2 ಸಾವಿರ ರೂ ಜಮೆಯಾಗಿತ್ತು.

- Advertisement -


ಗೃಹಲಕ್ಷ್ಮಿ ಯೋಜನೆಗಾಗಿ ರಾಜ್ಯ ಸರ್ಕಾರವು ಮಹಿಳಾ&ಮಕ್ಕಳ ಕಲ್ಯಾಣ ಇಲಾಖೆಗೆ ಹಣ ಬಿಡುಗಡೆ ಮಾಡಿದೆ. ಮೊದಲ ಕಂತಿನಲ್ಲಿ 4,600 ಕೋಟಿ ರೂ. ಬಿಡುಗಡೆ ಮಾಡಿದೆ. 2023-24ನೇ ಸಾಲಿನಲ್ಲಿ 17,500 ಕೋಟಿ ರೂ. ನಿಗದಿಪಡಿಸಲಾಗಿತ್ತು. ಇದೀಗ ಮೊದಲ ಕಂತಿನ ಹಣ ಬಿಡುಗಡೆ ಮಾಡಿಲಾಗಿದೆ. ಆಗಸ್ಟ್, ಸೆಪ್ಟೆಂಬರ್ ತಿಂಗಳ ಅವಧಿಗೆ 4,600 ಕೋಟಿ ರೂ. ಬಿಡುಗಡೆ ಮಾಡಲಾಗಿದೆ.

Join Whatsapp