ಎಲ್ಲಾ ವಿಧಾನ ಪರಿಷತ್ ಸದಸ್ಯರಿಗೂ 50 ಕೋಟಿ ರೂ. ಅನುದಾನ ನೀಡುವಂತೆ ಭೋಜೇಗೌಡರ ಆಗ್ರಹ

Prasthutha|

ಬೆಂಗಳೂರು: ನಾಮನಿರ್ದೇಶಿತ ವಿಧಾನ ಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ಅವರಿಗೆ ಕೋರಿಕೆಯ ಮೇರೆಗೆ 50 ಕೋಟಿ ರೂ. ಅನುದಾನ ನೀಡಿದಂತೆ ಎಲ್ಲ ವಿಧಾನ ಪರಿಷತ್ ಸದಸ್ಯರಿಗೂ 50 ಕೋಟಿ ರೂ. ಅನುದಾನ ನೀಡಬೇಕು ಎಂದು ಮೇಲ್ಮನೆ ಸದಸ್ಯ ಭೋಜೇಗೌಡ ರಾಜ್ಯ ಸರಕಾರವನ್ನು ಒತ್ತಾಯ ಮಾಡಿದ್ದಾರೆ.

- Advertisement -

ಈ ಬಗ್ಗೆ ಮಾಧ್ಯಮ ಹೇಳಿಕೆ ನೀಡಿರುವ ಅವರು,  ಮುಖ್ಯಮಂತ್ರಿಗಳು ಚನ್ನಪಟ್ಟಣ ಕ್ಷೇತ್ರಕ್ಕೆ ವಿಶೇಷ ಅನುದಾನ ನೀಡಿರುವುದು ಸ್ವಾಗತಾರ್ಹ. ಅಲ್ಲಿನ ವಿಧಾನ ಪರಿಷತ್ ಸದಸ್ಯರ ಕೋರಿಕೆಯನ್ನು ಮನ್ನಿಸಿ ಅನುದಾನ ಬಿಡುಗಡೆ ಮಾಡಿರುವುದು ಸಂತಸದ ಸಂಗತಿ ಎಂದು ಹೇಳಿದ್ದಾರೆ.

ಸಿ.ಪಿ.ಯೋಗೇಶ್ವರ್ ಅವರಿಗೆ ನೀಡಿದ ಮಾದರಿಯಲ್ಲಿ ಕರ್ನಾಟಕದ ಎಲ್ಲಾ ವಿಧಾನ ಪರಿಷತ್ತಿನ ಶಾಸಕರ ಕ್ಷೇತ್ರಕ್ಕೂ  50 ಕೋಟಿಗಳ ಅನುದಾನ ನೀಡಬೇಕೆಂದು ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಒತ್ತಾಯ ಮಾಡಿದ್ದಾರೆ.

Join Whatsapp
Exit mobile version