Home ಟಾಪ್ ಸುದ್ದಿಗಳು ಕಾಂಗ್ರೆಸ್ ಟಿಕೆಟ್‌ಗೆ 5 ಸಾವಿರ ಶುಲ್ಕ, 2 ಲಕ್ಷ ಡಿ.ಡಿ: ಡಿ.ಕೆ.ಶಿ

ಕಾಂಗ್ರೆಸ್ ಟಿಕೆಟ್‌ಗೆ 5 ಸಾವಿರ ಶುಲ್ಕ, 2 ಲಕ್ಷ ಡಿ.ಡಿ: ಡಿ.ಕೆ.ಶಿ

ಬೆಂಗಳೂರು: ರಾಜ್ಯ ಕಾಂಗ್ರೆಸ್ ನಲ್ಲಿ ಮುಂಬರುವ ವಿಧಾನಸಭೆ ಚುನಾವಣೆಗೆ ಟಿಕೆಟ್‌ ಬಯಸುವ ಸಾಮಾನ್ಯ ವರ್ಗದ ಆಕಾಂಕ್ಷಿ ಗಳು ಕೆಪಿಸಿಸಿಗೆ ₹5 ಸಾವಿರ ಅರ್ಜಿ ಶುಲ್ಕದ ಜೊತೆಗೆ ₹2 ಲಕ್ಷದ ಡಿ.ಡಿ ಸಲ್ಲಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಹೇಳಿದ್ದಾರೆ.

ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಈ ಮಾಹಿತಿ ನೀಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌, ‘ಪಕ್ಷ ಮುಂದಿನ ಚುನಾವಣೆಗೆ ಸಜ್ಜಾಗುತ್ತಿದ್ದು, ಟಿಕೆಟ್ ಬಯಸುವವರು ಇದೇ 5ರಿಂದ 15ರವರೆಗೆ ಅರ್ಜಿ ಸಲ್ಲಿಸಬಹುದು’ ಎಂದರು. ಪರಿಶಿಷ್ಟರಿಗೆ ಡಿ.ಡಿಯಲ್ಲಿ ಶೇ 50ರಷ್ಟು ವಿನಾಯಿತಿ ನೀಡಲಾಗಿದೆ. ಹೀಗೆ ಸಂಗ್ರಹವಾಗುವ ಮೊತ್ತ ಕೆಪಿಸಿಸಿ ಕಟ್ಟಡ ಕಾಮಗಾರಿ ನಿಧಿಗೆ ಜಮೆ ಆಗಲಿದೆ ಎಂದರು.

‘ಟಿಕೆಟ್ ಆಕಾಂಕ್ಷಿಗಳು ಹಾಲಿ ಶಾಸಕರ ಸಮೇತ ಎಲ್ಲರೂ ಅರ್ಜಿ ಸಲ್ಲಿಸಬಹುದು. ಚುನಾವಣೆಯಲ್ಲಿ ಸ್ಪರ್ಧಿಸಲು ನಾನು ಕೂಡ ಈ ಅರ್ಜಿ ಹಾಕಬೇಕು. ಇಲ್ಲಿ ವ್ಯಕ್ತಿಗಿಂತ ಪಕ್ಷ ಮುಖ್ಯ’ ಎಂದೂ ಅವರು ವಿವರಿಸಿದರು.‘ಪಕ್ಷದ ಟಿಕೆಟ್‌ಗೆ ಯಾವ ಮಾನ ದಂಡದಲ್ಲಿ ಹಣ ನೀಡಬೇಕು’ ಎಂಬ ಪ್ರಶ್ನೆಗೆ, ‘ಯಾವುದೇ ಮಾನದಂಡವಿಲ್ಲ. ಪಕ್ಷದ ಕಟ್ಟಡ, ಪಕ್ಷದ ನಿಧಿ, ಚುನಾವಣಾ ಪ್ರಚಾರ, ಜಾಹೀರಾತು ನೀಡಲು ಹಣ ಬೇಕಿದೆ. ಪಕ್ಷಕ್ಕೆ ₹20 ಸಾವಿರಕ್ಕಿಂತ ಹೆಚ್ಚಿನ ನಗದು ಪಡೆಯುವಂತಿಲ್ಲ. ನಮಗೆ ಯಾವುದೇ ಚುನಾವಣಾ ಬಾಂಡ್ ಬರುತ್ತಿಲ್ಲ. ಕಾರ್ಯಕರ್ತರಾದರೂ ಪಕ್ಷಕ್ಕೆ ಹಣ ನೀಡಲಿ’ ಎಂದರು.

Join Whatsapp
Exit mobile version