ಕೊಪ್ಪಳ: ಗಂಗಾವತಿಯ ಪ್ರಸಿದ್ಧ ದರ್ಗಾದ ಅಭಿವೃದ್ಧಿಗೆ 6 ಕೋಟಿ ರೂಪಾಯಿ ದೇಣಿಗೆ ನೀಡುವುದಾಗಿ ಮಾಜಿ ಸಚಿವ ಜನಾರ್ದನ ರೆಡ್ಡಿ ಘೋಷಿಸಿದ್ದಾರೆ.
ಜ.25ಕ್ಕೆ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ಕರೆದಿದ್ದು, ರಾಜಕೀಯ ನಡೆಯ ಬಗ್ಗೆ ಮಹತ್ವದ ಘೋಷಣೆ ಮಾಡಲಿದ್ದಾರೆ. ಇದಕ್ಕೂ ಮೊದಲು ಮುಸ್ಲಿಮ್ ಮತ ಮತಬುಟ್ಟಿಯ ಮೇಲೆ ಕಣ್ಣಿಟ್ಟಿರುವ ಜನಾರ್ದನ ರೆಡ್ಡಿ, ದರ್ಗಾ ಅಭಿವೃದ್ಧಿಗಾಗಿ 6 ಕೋಟಿ ರೂ. ವೆಚ್ಚದ ಕಾಂಟ್ರಾಕ್ಟ್ ಗೆ ಸಹಿ ಮಾಡಿದ್ದಾರೆ.
ಗಂಗಾವತಿಯ ಖಲಿಲುಲ್ಲಾ ಖಾದ್ರಿ ದರ್ಗಾ ಅಭಿವೃದ್ಧಿಗೆ ದೇಣಿಗೆ ನೀಡಿದ್ದು, ಮಾಜಿ ಶಾಸಕ ಇಕ್ಬಾಲ್ ಅನ್ಸಾರಿ ಮತ ಬ್ಯಾಂಕ್ ಗೆ ರೆಡ್ಡಿ ನೇರವಾಗಿ ಕೈ ಹಾಕಿದ್ದಾರೆ ಎಂದು ರಾಜಕೀಯ ವಿಶ್ಲೇಷಕರು ಇದನ್ನು ವ್ಯಾಖ್ಯಾನಿಸಿದ್ದಾರೆ.