ಮತದಾರರಿಗೆ ತಲಾ 6000 ರೂ. ಆಮಿಷ ಒಡ್ಡಿದ ರಮೇಶ್ ಜಾರಕಿಹೊಳಿ ವಿರುದ್ಧ ದೂರು

Prasthutha|

ಬೆಂಗಳೂರು: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಪ್ರತಿ ಮತದಾರರಿಗೆ 6 ಸಾವಿರ ರೂ. ನೀಡಿ ಮತ ಕೇಳಲಾಗುವುದು. ಎದುರಾಳಿ ಅಭ್ಯರ್ಥಿ ಎಷ್ಟೇ ದುಡ್ಡು ಖರ್ಚು ಮಾಡಿದರೂ ಅದಕ್ಕಿಂತ 10 ಕೋಟಿ ಹೆಚ್ಚಿನ ಹಣ ಖರ್ಚು ಮಾಡಲು ನಾವು ಸಿದ್ಧವಿದ್ದೇವೆ ಎಂಬ ಹೇಳಿಕೆ ನೀಡಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರ ವಿರುದ್ಧ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ನೇತೃತ್ವದ ನಿಯೋಗ ಹೈಗ್ರೌಂಡ್ ಪೊಲೀಸ್ ಠಾಣೆಯಲ್ಲಿ ಬುಧವಾರ ದೂರು ದಾಖಲಿಸಿತು.


ರಮೇಶ್ ಜಾರಕಿಹೊಳಿ, ಪ್ರತಿ ಮತದಾರನಿಗೆ 6000 ರೂಪಾಯಿ ಲಂಚದ ಬಹಿರಂಗ ಆಮಿಷದ ಮೂಲಕ ರಾಜ್ಯದ 5 ಕೋಟಿ ಮತದಾರರನ್ನು 30 ಸಾವಿರ ಕೋಟಿ ಲಂಚದ ಮೂಲಕ ಖರೀದಿ ಮಾಡಲು ಸಂಚು ನಡೆಸಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿ, ಅವರಿಗೆ ಪ್ರೇರಣೆ ನೀಡಿರುವ ಸಿಎಂ ಬಸವರಾಜ ಬೊಮ್ಮಾಯಿ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೇಲ್, ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡ ವಿರುದ್ಧ ತನಿಖೆ ನಡೆಸುವಂತೆ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸರಿಗೆ ಈ ನಿಯೋಗ ಬುಧವಾರ ದೂರು ದಾಖಲಿಸಿದೆ.

- Advertisement -