5 ವರ್ಷದ ತೆರಿಗೆ ಹಂಚಿಕೆಯಲ್ಲಿ ರಾಜ್ಯಕ್ಕೆ 60 ಸಾವಿರ ಕೋಟಿ ಅನ್ಯಾಯ: ಸಿಎಂ ಸಿದ್ದರಾಮಯ್ಯ

Prasthutha|

ಬೆಳಗಾವಿ: ಐದು ವರ್ಷಗಳ ತೆರಿಗೆ ಹಂಚಿಕೆಯಲ್ಲಿ ರಾಜ್ಯಕ್ಕೆ ಸುಮಾರು 60 ಸಾವಿರ ಕೋಟಿ ರೂ. ಅನ್ಯಾಯ ವಾಗಿದೆ. ಬಿಜೆಪಿ ಸಂಸದರು ಕರ್ನಾಟಕದ ಪರ ಧ್ವನಿ ಎತ್ತದೆ, ರಾಜ್ಯದ ಜನರಿಗೆ ದ್ರೋಹ ಎಸಗುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದರು.

- Advertisement -

ಸುದ್ದಿಗಾರರ ಜತೆ ಮಾತನಾಡಿ, ಕೇಂದ್ರ ಬಿಜೆಪಿ ಸರಕಾರ ರಾಜ್ಯಕ್ಕೆ ದ್ರೋಹ ಬಗೆಯುತ್ತಿದೆ. ನಮಗೆ ತೆರಿಗೆ ಪಾಲಿನಲ್ಲಿ ಅನ್ಯಾಯ ಆಗಿರುವುದಕ್ಕೆ ರಾಜ್ಯದ ಜನರು ಕೇಂದ್ರದ ವಿರುದ್ಧ ಧ್ವನಿ ಎತ್ತಬೇಕು. ಬಿಜೆಪಿಯವರು, ಕೇಂದ್ರ ಸರಕಾರವನ್ನು ಸಮರ್ಥಿಸುತ್ತಿರುವುದು ಕರ್ನಾಟಕದ ಜನರಿಗೆ ಮಾಡುವ ದ್ರೋಹ ಎಂದು ಟೀಕಿಸಿದರು.

ತೆರಿಗೆ ಪಾಲಿನ ಹಂಚಿಕೆಯಲ್ಲಿ ಕೇಂದ್ರ ಮತ್ತೆ ಅನ್ಯಾಯ ಮಾಡಿದೆ. ನಮಗೆ 6,498 ಕೋಟಿ ರೂ.ಬಿಡುಗಡೆ ಮಾಡಿದ್ದಾರೆ. ಆದರೆ ಉತ್ತರಪ್ರದೇಶಕ್ಕೆ 31 ಸಾವಿರ ಕೋಟಿ ರೂ.ಗೂ ಹೆಚ್ಚು ಹಣ ಕೊಟ್ಟಿದ್ದಾರೆ. ನಮಗೂ ಅವರಿಗೂ ಎಷ್ಟೊಂದು ತಾರತಮ್ಯ ಯಾಕೆ? ಎಂದು ಪ್ರಶ್ನಿಸಿದರು. ರಾಜ್ಯದಲ್ಲಿ ಅಷ್ಟೊಂದು ಜನ ಸಂಸದರನ್ನು ಗೆಲ್ಲಿಸಿಕೊಟ್ಟರಲ್ಲಾ ಆ ಸಂಸದರೆಲ್ಲರೂ ಕರ್ನಾಟಕದ ಪರ ಧ್ವನಿ ಎತ್ತಬೇಕಲ್ಲವೇ? ಇವತ್ತಿನವರೆಗೂ ಅವರು ಧ್ವನಿ ಎತ್ತಿಲ್ಲ ಎಂದು ಹೇಳಿದರು.



Join Whatsapp