ದಾಖಲೆಯಿಲ್ಲದ 76 ಲಕ್ಷ ರೂ. ನಗದು ಸಿಸಿಬಿ ಜಪ್ತಿ

Prasthutha|

ಬೆಂಗಳೂರು: ದಾಖಲೆಯಿಲ್ಲದ 76 ಲಕ್ಷ ರೂ.ಹಣವನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದು ತನಿಖೆಯನ್ನು ಕೈಗೊಂಡಿದ್ದಾರೆ.

- Advertisement -

ಶಾಂತಿ ನಗರ ಬಸ್ ನಿಲ್ದಾಣದಲ್ಲಿ ನಿನ್ನೆ ರಾತ್ರಿ ನಿಂತಿದ್ದ ಇಬ್ಬರು ವ್ಯಕ್ತಿಗಳಲ್ಲಿ ದಾಖಲೆ ಇಲ್ಲದ ಹಣ ಇರುವ ಖಚಿತ ಮಾಹಿತಿ ಅಧರಿಸಿ ದಾಳಿ ನಡೆಸಿದ್ದ ಸಿಸಿಬಿ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ.

ಅವರ ಬಳಿ ದಾಖಲೆ ಇಲ್ಲದ 76 ಲಕ್ಷ ನಗದು ಪತ್ತೆಯಾಗಿದ್ದು, ಅದನ್ನು ವಶಪಡಿಸಿಕೊಂಡು ಪರಿಶೀಲನೆ ನಡೆಸಲಾಗಿದೆ.

- Advertisement -

ಹಣ ದೊರೆತ ಬಗ್ಗೆ ವಿಲ್ಸನ್ ಗಾರ್ಡನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಈಗ ಹಣದ ಮೂಲದ ಬಗ್ಗೆ ಇಬ್ಬರನ್ನು ವಿಚಾರಣೆ ನಡೆಸುತ್ತಿದ್ದಾರೆ.

Join Whatsapp