ನವದೆಹಲಿ: ಸುಪ್ರೀಂ ಕೋರ್ಟ್ ನ ಕಟ್ಟಡ ಸಂಕೀರ್ಣದ ವಿಸ್ತರಣೆಗಾಗಿ ಕೇಂದ್ರ ಸರ್ಕಾರವು ₹ 800 ಕೋಟಿ ಮೊತ್ತದ ಯೋಜನೆಗೆ ಅನುಮೋದನೆ ನೀಡಿದೆ ಎಂದು ಪ್ರಧಾನಿ ಮೋದಿ ಹೇಳಿದರು.
ಸುಪ್ರೀಂ ಕೋರ್ಟ್ನ ವಜ್ರ ಮಹೋತ್ಸವದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ‘ಸುಲಲಿತ ನ್ಯಾಯವು ಪ್ರತಿಯೊಬ್ಬ ಭಾರತೀಯ ನಾಗರಿಕನ ಹಕ್ಕು. ಸುಪ್ರೀಂ ಕೋರ್ಟ್ ಇದನ್ನು ಒದಗಿಸುವ ಮಾಧ್ಯಮವಾಗಿದೆ’ ಎಂದು ತಿಳಿಸಿದರು.
ದೇಶದಲ್ಲಿನ ಸಂಪೂರ್ಣ ನ್ಯಾಯ ವ್ಯವಸ್ಥೆಯನ್ನು ನಿರ್ವಹಿಸುತ್ತಿರುವ ಸುಪ್ರೀಂ ಕೋರ್ಟ್, ಮಾರ್ಗದರ್ಶನವನ್ನು ನೀಡುತ್ತಿದೆ. ಎಲ್ಲ ಭಾಗಕ್ಕೂ ನ್ಯಾಯಾಲಯವು ಪ್ರವೇಶಿಸುವ ನಿಟ್ಟಿನಲ್ಲಿ ಸರ್ಕಾರ ಆದ್ಯತೆ ನೀಡುತ್ತಿದೆ. ಇ ಕೋರ್ಟ್ ಮಿಷನ್ ಯೋಜನೆಯ ಮೂರನೇ ಹಂತಕ್ಕೆ ಒಪ್ಪಿಗೆ ನೀಡಲಾಗುವುದು ಎಂದರು.