Home ಟಾಪ್ ಸುದ್ದಿಗಳು ಮಂಗಳೂರು ವಿಮಾನ ನಿಲ್ದಾಣದಲ್ಲಿ 98 ಲಕ್ಷ ರೂ. ಮೌಲ್ಯದ ಬಂಗಾರ ವಶ

ಮಂಗಳೂರು ವಿಮಾನ ನಿಲ್ದಾಣದಲ್ಲಿ 98 ಲಕ್ಷ ರೂ. ಮೌಲ್ಯದ ಬಂಗಾರ ವಶ

ಮಂಗಳೂರು: ಗುದನಾಳದಲ್ಲಿ ಮರೆ ಮಾಡಿ ಚಿನ್ನ ಸಾಗಾಟ ಮಾಡುತ್ತಿರುವುದನ್ನು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಪತ್ತೆ ಹಚ್ಚಿದ್ದಾರೆ.

ಜನವರಿ 8 ರಂದು ಏರ್ ಇಂಡಿಯಾ ಎಕ್ಸ್ ಪ್ರೆಸ್ ಫ್ಲೈಟ್ IX 816 ಮೂಲಕ ಅಬುಧಾಬಿಯಿಂದ ಮಂಗಳೂರಿಗೆ ಪ್ರಯಾಣಿಸುತ್ತಿದ್ದ ಪ್ರಯಾಣಿಕ ಅಕ್ರಮವಾಗಿ ಚಿನ್ನ ಸಾಗಾಟ ಮಾಡುತ್ತಿದ್ದ ಎಂದು ತಿಳಿದು ಬಂದಿದೆ. ಪೇಸ್ಟ್ ರೂಪದಲ್ಲಿ ಚಿನ್ನವನ್ನು ಹೊಂದಿರುವ ಆ ವ್ಯಕ್ತಿ ಗುದನಾಳದಲ್ಲಿ ಮರೆಮಾಡಿ ಇಟ್ಟುಕೊಂಡಿದ್ದ. ಅದರಲ್ಲಿ 24 ಕ್ಯಾರೆಟ್ ಶುದ್ಧತೆಯ 1,579 ಗ್ರಾಂ ಚಿನ್ನ ಪತ್ತೆಯಾಗಿದೆ. ಇದರ ಮೌಲ್ಯ ರೂ. 98,68,750 ಎಂದು ಅಂದಾಜಿಸಲಾಗಿದೆ. ಆರೋಪಿಯನ್ನು ಬಂಧಿಸಿದ ಕಸ್ಟಮ್ಸ್ ಅಧಿಕಾರಿಗಳು ವಿಚಾರಣೆ ಮುಂದುವರಿಸಿದ್ದಾರೆ.

Join Whatsapp
Exit mobile version