ಮುಸ್ಲಿಮ್ ಕಥಾಹಂದರ ಹೊಂದಿದೆ ಎಂದು ಆರೋಪಿಸಿ ನಾಟಕ ಕಾರ್ಯಕ್ರಮಕ್ಕೆ ನುಗ್ಗಿದ ಆರ್ ಎಸ್ ಎಸ್ ಕಾರ್ಯಕರ್ತರು

Prasthutha|

ಆನವಟ್ಟಿ: ನಾಟಕಕ್ಕೆ ಮುಸ್ಲಿಂ ಪ್ರಧಾನ ಕಥಾಹಂದರ ಹೊಂದಿದೆ ಎಂದು ಆರೋಪಿಸಿ ಬಜರಂಗದಳ ಹಾಗೂ ಆರ್ ಎಸ್ ಎಸ್ ಕಾರ್ಯಕರ್ತರು ಸೊರಬ ತಾಲ್ಲೂಕಿನ ಆನವಟ್ಟಿಯ ವೀರಶೈವ ಕಲ್ಯಾಣ ಮಂದಿರಕ್ಕೆ ನುಗ್ಗಿ ದಾಂಧಲೆ ಎಬ್ಬಿಸಿದ ಘಟನೆ ನಡೆದಿದ್ದು, ಇದರಿಂದಾಗಿ ಸಂಘಟಕರು ಅನಿವಾರ್ಯವಾಗಿ ನಾಟಕ ಪ್ರದರ್ಶನವನ್ನು ಅರ್ಧದಲ್ಲಿಯೇ ನಿಲ್ಲಿಸಿದರು.

- Advertisement -


ಜೋಸೆಫ್ ಸ್ಟೀನ್ ಅವರ ‘ಪಿಡ್ಲರ್ ಆನ್ ದಿ ರೂಫ್’ ನಾಟಕವನ್ನು ಜಯಂತ ಕಾಯ್ಕಿಣಿ ಅವರು ಕನ್ನಡಕ್ಕೆ ರೂಪಾಂತರ ಮಾಡಿದ್ದರು. ಕಾರ್ಯಕ್ರಮವು ರಾತ್ರಿ 7.45ಕ್ಕೆ ನಾಟಕ ಆರಂಭವಾಗಿತ್ತು. 9.30ರ ಹೊತ್ತಿಗೆ ಆರ್ ಎಸ್ ಎಸ್ ನ ಶ್ರೀಧರ ಆಚಾರ್, ಬಜರಂಗದಳದ ಮಂಜಣ್ಣ ಸಭಾಂಗಣದ ಒಳಗೆ ಬಂದಿದ್ದು, ಸಂಜಯ್ ಡೊಂಗ್ರೆ ಎಂಬುವವರು ಹೊರಗಡೆ ನಿಂತಿದ್ದರು. ‘ಬೋಲೊ ಭಾರತ್ ಮಾತಾಕಿ ಜೈ’, ‘ಜೈ ಹಿಂದ್’ ಘೋಷಣೆಗಳನ್ನು ಕೂಗಿದ ಅವರು, ನಾಟಕವನ್ನು ನಿಲ್ಲಿಸುವಂತೆ ಆಗ್ರಹಿಸಿದರು. ಪ್ರೇಕ್ಷಕರನ್ನು ಒತ್ತಾಯಪೂರ್ವಕವಾಗಿ ಹೊರಗೆ ಕಳುಹಿಸಿದರು. ಹೀಗಾಗಿ ಸಂಘಟಕರು ನಾಟಕವನ್ನು ಅರ್ಧದಲ್ಲಿಯೇ ಮೊಟಕುಗೊಳಿಸಿದರು.
ದೇಶದಲ್ಲಿ ಹಿಂದೂ–ಮುಸ್ಲಿಂ ಗಲಾಟೆ ನಡೆಯುತ್ತಿರುವಾಗ ಮುಸ್ಲಿ ಮರೇ ಪ್ರಧಾನವಾಗಿರುವ ಕಥಾವಸ್ತು ಇಟ್ಟುಕೊಂಡು ನಾಟಕ ಮಾಡಿರುವುದು ಬೇಸರದ ಸಂಗತಿ. ಹಾಗಾಗಿ ನಾಟಕವನ್ನು ಅರ್ಧಕ್ಕೆ ನಿಲ್ಲಿಸಬೇಕಾಯಿತು’ ಎಂದು ಶ್ರೀಧರ ಆಚಾರ್ ಹಾಗೂ ಮಂಜಣ್ಣ ಸಮರ್ಥಿಸಿಕೊಂಡಿದ್ದಾರೆ.


ಸಂಘಪರಿವಾರದ ಕಾರ್ಯಕರ್ತರು ಪದೇ ಪದೇ ಹಿಂದೂ ಮುಸ್ಲಿಮರಲ್ಲಿ ವಿಷಬೀಜಾವನ್ನು ಬಿತ್ತಿ ಗಲಭೆ ಎಬ್ಬಿಸಲು ಪ್ರಯತ್ನಿಸುತ್ತಿರುತ್ತಾರೆ. ಈ ಹಿಂದೆ ಶಿವಮೊಗ್ಗ ನಗರದಲ್ಲಿ ನಡೆದ ಮಾರಿಕಾಂಬ ಜಾತ್ರೆಯ ವೇಳೆಯಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ದೇವಸ್ಥಾನದ ಬಳಿ ಮಳಿಗೆ ಹಾಕಲು ಅವಕಾಶ ನೀಡಿರಲಿಲ್ಲ.

Join Whatsapp