ಕಾಂಗ್ರೆಸ್ – ಆರ್ ಎಸ್ ಎಸ್ ಒಂದಕ್ಕೊಂದು ಬೆಸೆದುಕೊಂಡೇ ಇದೆ: ನಟ ಚೇತನ್

Prasthutha|

► ಕಾಂಗ್ರೆಸ್ ನಾಯಕನಿಂದಲೇ ಆರ್ ಎಸ್ ಎಸ್ ಸ್ಥಾಪನೆ


ಬೆಂಗಳೂರು: ಕಾಂಗ್ರೆಸ್ ಪಕ್ಷದ ಸದಸ್ಯರಾದ ಕೆ.ಬಿ.ಹೆಡ್ಗೆವಾರ್ ಅವರು 1925ರಲ್ಲಿ ಆರ್ ಎಸ್ ಎಸ್ ಅನ್ನು ಸ್ಥಾಪಿಸಿದರು. ಕಾಂಗ್ರೆಸ್ ನ ಮತ್ತೊಬ್ಬ ಸದಸ್ಯ ಬಾಲ ಗಂಗಾಧರ ತಿಲಕ್ ಅವರು ಹೆಡ್ಗೆವಾರ್ ಅವರನ್ನು ಪ್ರಭಾವಿಸಿದ್ದರು ಎಂದು ಕನ್ನಡ ಚಿತ್ರ ನಟ, ಹೋರಾಟಗಾರ ಚೇತನ್ ಅಹಿಂಸಾ ಹೇಳಿದ್ದಾರೆ.

- Advertisement -

ಆರ್ ಎಸ್ ಎಸ್ (ಸಂಘಪರಿವಾರ) ಯಾವತ್ತಿನಿಂದಲೂ ಒಂದಕ್ಕೊಂದು ಬೆಸೆದುಕೊಂಡೇ ಇದೆ. ಬ್ರಾಹ್ಮಣ್ಯವನ್ನು ಉಳಿಸಿಕೊಳ್ಳುವುದರಿಂದ ಕಾಂಗ್ರೆಸ್ ಮತ್ತು ಆರ್ ಎಸ್ ಎಸ್ ಎರಡಕ್ಕೂ ಲಾಭವಾಗುತ್ತದೆ. ಸಮಾನತೆ ಕಾಂಗ್ರೆಸ್ ಮತ್ತು ಸಂಘ, ಎರಡನ್ನೂ ಸೋಲಿಸಬೇಕು ಎಂದು ಅವರು ತಿಳಿಸಿದ್ದಾರೆ.


ಇತ್ತೀಚೆಗಷ್ಟೇ ಚೇತನ್ ಅವರು ಕಾಂಗ್ರೆಸ್ ಮುಖಂಡ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದರು.
“ಕರ್ನಾಟಕದ ಪ್ರಬಲ ಮತ್ತು ವಾದನೀಯವಾಗಿ ಕಾಂಗ್ರೆಸ್ಸಿನ ಅತ್ಯುತ್ತಮ ನಾಯಕರಾದ ಸಿದ್ದರಾಮಯ್ಯನವರು, ಮೂಲಭೂತವಾಗಿ ಬ್ರಾಹ್ಮಣ್ಯವನ್ನು ಹೆಚ್ಚು ಆಳವಾಗಿ ಬೇರೂರಿಸುವ ‘ಜಾತಿ’ ನಾಯಕರು. ದೇಶಕ್ಕೆ ಮತ್ತು ರಾಜ್ಯಕ್ಕೆ ಇಂತಹ ನಾಯಕರ ಅಗತ್ಯ ಇಲ್ಲ” ಎಂದು ತಮ್ಮ ಅಭಿಪ್ರಾಯವನ್ನು ಹೇಳುವ ಮೂಲಕ ಅವರು ವಿವಾದವನ್ನು ಮತ್ತೊಮ್ಮೆ ಮೈಮೇಲೆ ಎಳೆದುಕೊಂಡಿದ್ದಾರೆ.

- Advertisement -