ಬಿಹಾರ: ಆರ್ಎಸ್ಎಸ್ ಮತ್ತು ಬಿಜೆಪಿಯ ಸಿದ್ಧಾಂತಗಳು ದೇಶದಲ್ಲಿ ಹಿಂಸೆ ಹಾಗೂ ದ್ವೇಷವನ್ನು ಹರಡುತ್ತಿವೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.
ಭಾರತ್ ಜೋಡೊ ನ್ಯಾಯ ಯಾತ್ರೆಯ ಭಾಗವಾಗಿ ಕಿಶನ್ಗಂಜ್ನಲ್ಲಿ ಆಯೋಜಿಸಿದ್ದ ರ್ಯಾಲಿಯಲ್ಲಿ ಅವರು ಮಾತನಾಡಿದರು. ಬಿಜೆಪಿ ನೇತೃತ್ವದ ಎನ್ಡಿಎ ಸರ್ಕಾರ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದ ಬಳಿಕ ವಿವಿಧ ಧರ್ಮಗಳು ಹಾಗೂ ಜಾತಿಗಳಿಗೆ ಸೇರಿದ ಜನರು ಪರಸ್ಪರ ಕಚ್ಚಾಡುತ್ತಿದ್ದಾರೆ ಎಂದು ಅವರು ತಿಳಿಸಿದರು.
ಸಹೋದರರು ತಮ್ಮೊಳಗೆ ಜಗಳವಾಡುವಂತಹ ವಾತಾವರಣವನ್ನು ಆರ್ಎಸ್ಎಸ್ ಮತ್ತು ಬಿಜೆಪಿ ಈ ದೇಶದಲ್ಲಿ ಸೃಷ್ಟಿಸಿವೆ. ಆದರೆ ನಾವು ಜನರನ್ನು ಒಗ್ಗೂಡಿಸುವ ಕೆಲಸ ಮಾಡುತ್ತೇವೆ. ದೇಶದಲ್ಲಿನ ‘ನಫ್ರತ್ ಕಾ ಬಜಾರ್’ನಲ್ಲಿ (ದ್ವೇಷದ ಮಾರುಕಟ್ಟೆ) ‘ಮೊಹಬ್ಬತ್ ಕಿ ದುಕಾನ್’ (ಪ್ರೀತಿಯ ಅಂಗಡಿ) ತೆರೆಯಲು ಬಯಸುತ್ತೇವೆ ಎಂದು ಕಾಂಗ್ರೆಸ್ ವರಿಷ್ಟ, ಸಂಸದ ರಾಹುಲ್ ಗಾಂಧಿ ಹೇಳಿದರು.
2020ರ ವಿಧಾನಸಭಾ ಚುನಾವಣೆ ಪ್ರಚಾರದಲ್ಲಿ ಪಾಲ್ಗೊಂಡ ಬಳಿಕ ರಾಹುಲ್ ಗಾಂಧಿ ಬಿಹಾರಕ್ಕೆ ನೀಡಿದ ಮೊದಲು ಭೇಟಿ ಇದಾಗಿದೆ.