Home ಟಾಪ್ ಸುದ್ದಿಗಳು ಆರೆಸ್ಸೆಸ್, ಬಿಜೆಪಿ ಹಿಂದೂ ರಾಷ್ಟ್ರ ಕಟ್ಟುವ ನಿಟ್ಟಿನಲ್ಲಿ ಪ್ರಯತ್ನಿಸುತ್ತಿವೆ, ಇವತ್ತಲ್ಲ ನಾಳೆ ಕಟ್ಟುತ್ತೇವೆ: ಸಚಿವ ನಾರಾಯಣಸ್ವಾಮಿ

ಆರೆಸ್ಸೆಸ್, ಬಿಜೆಪಿ ಹಿಂದೂ ರಾಷ್ಟ್ರ ಕಟ್ಟುವ ನಿಟ್ಟಿನಲ್ಲಿ ಪ್ರಯತ್ನಿಸುತ್ತಿವೆ, ಇವತ್ತಲ್ಲ ನಾಳೆ ಕಟ್ಟುತ್ತೇವೆ: ಸಚಿವ ನಾರಾಯಣಸ್ವಾಮಿ

ಚಿತ್ರದುರ್ಗ: ಆರೆಸ್ಸೆಸ್ ಮತ್ತು ಬಿಜೆಪಿ ಹಿಂದೂ ರಾಷ್ಟ್ರ ಕಟ್ಟುವ ನಿಟ್ಟಿನಲ್ಲಿ ಪ್ರಯತ್ನಿಸುತ್ತಿವೆ. ಹಾಗೆಂದು ಬೇರೆ ಧರ್ಮವನ್ನು ವಿರೋಧಿಸುವುದಿಲ್ಲ ಎಂದು ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ರಾಜ್ಯ ಸಚಿವ ಎ.ನಾರಾಯಣಸ್ವಾಮಿ ಹೇಳಿದ್ದಾರೆ.


ಚಿತ್ರದುರ್ಗದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದೂ ರಾಷ್ಟ್ರ ನಿರ್ಮಾಣ ಖಚಿತ. ಇಂದಲ್ಲ ನಾಳೆ ಹಿಂದೂ ರಾಷ್ಟ್ರ ಕಟ್ಟಿಯೇ ತೀರುತ್ತೇವೆ. ಬಿಜೆಪಿ ಯಾವತ್ತೂ ಡೋಂಗಿ ರಾಜಕಾರಣ ಮಾಡುವುದಿಲ್ಲ. ಅದರ ಅಗತ್ಯವೂ ನಮಗಿಲ್ಲ. ಹಿಂದೂ ಧರ್ಮದ ಭಾವನೆಗಳಿಗೆ ಧಕ್ಕೆ ಉಂಟು ಮಾಡುವ ಕೆಲಸ ಎಂದಿಗೂ ಬಿಜೆಪಿ ಮಾಡುವುದಿಲ್ಲ ಎಂದರು.


ನಂಜನಗೂಡು ದೇಗುಲ ಧ್ವಂಸ ಗೊತ್ತಿಲ್ಲದೆಯೂ ಆಗಿರಬಹುದು. ಈ ಬಗ್ಗೆ ಚರ್ಚೆ ನಡೆಸಿ ಸರ್ಕಾರ ತೀರ್ಮಾನ ಕೈಗೊಳ್ಳಲಿದೆ. ನ್ಯಾಯಾಲಯದ ಆದೇಶದಲ್ಲಿ ಲೋಪವಿದ್ದರೆ ತಿದ್ದುಪಡಿ ಮಾಡುವ ಅಧಿಕಾರ ಸಂಸತ್ತಿಗೆ ಇದೆ ಎಂದು ಹೇಳಿದರು.
ಧಾರ್ಮಿಕ ಮಂದಿರಗಳಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನೀಡಿದ ಆದೇಶ ಪಾಲನೆ ಮಾಡುವುದು ಸರ್ಕಾರದ ಕರ್ತವ್ಯ. ಪ್ರಜಾತಂತ್ರ ವ್ಯವಸ್ಥೆಯಲ್ಲಿ ಸುಪ್ರೀಂ ಕೋರ್ಟ್ಗೆ ಅತ್ಯುನ್ನತ ಅಧಿಕಾರವಿದೆ ಎಂದು ಸಚಿವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

Join Whatsapp
Exit mobile version