ಮುಂಬೈ: RSS ಮುಖವಾಣಿ ಪಾಂಚಜನ್ಯ ಪತ್ರಿಕೆಯಲ್ಲಿ ಅಮೆಜಾನ್ ಕಂಪನಿಯನ್ನು, ‘ಈಸ್ಟ್ ಇಂಡಿಯಾ ಕಂಪನಿ 2.0’ಗೆ ಹೋಲಿಕೆ ಮಾಡಲಾಗಿದೆ.
ಭಾರತೀಯ ಮಾರುಕಟ್ಟೆಯಲ್ಲಿ ಏಕಸ್ವಾಮ್ಯ ಸಾಧಿಸಲು ಅಮೆಜಾನ್ ಯತ್ನಿಸುತ್ತಿದೆ. 18ನೇ ಶತಮಾನದಲ್ಲಿ ಈಸ್ಟ್ ಇಂಡಿಯಾ ಕಂಪನಿ ಭಾರತ ಆಕ್ರಮಿಸಿಕೊಳ್ಳಲು ಮಾಡಿದ ಪ್ರಯತ್ನವನ್ನೇ ಇದೀಗ ಅಮೆಜಾನ್ ಕಂಪನಿ ಮಾಡುತ್ತಿದೆ.
ಅಲ್ಲದೆ, ಅಮೆಜಾನ್ ಪ್ರೈಮ್ ನಲ್ಲಿ ಭಾರತದ ಸಂಸ್ಕೃತಿಗೆ ವಿರುದ್ಧವಾದ ಚಲನಚಿತ್ರಗಳಿಗೆ ಅವಕಾಶ ಮಾಡಿಕೊಡಲಾಗುತ್ತಿದೆ ಎಂದು ಬರೆಯಲಾಗಿದೆ.
ಭಾರತದಲ್ಲಿ ತನಗೆ ಅನುಕೂಲಕರವಾದ ನೀತಿಗಳನ್ನು ರೂಪಿಸಿಕೊಳ್ಳಲು ಅಮೆಜಾನ್ ಕೋಟ್ಯಂತರ ರೂಪಾಯಿ ಲಂಚ ನೀಡಿದೆ ಎಂದು ಆರೋಪಿಸಲಾಗಿದೆ. ಈ ಹಿನ್ನೆಲೆಯಲ್ಲಿ ಅಮೆಜಾನ್ ವಿರುದ್ಧ ತನಿಖೆ ನಡೆಯಬೇಕು ಎಂದು ಪಾಂಚಜನ್ಯ ಪತ್ರಿಕೆಯಲ್ಲಿ ಆಗ್ರಹಿಸಲಾಗಿದೆ.