RSS ಕಚೇರಿಯಲ್ಲಿ ಹಂಗಾಮಿ ಸಿಎಂ ಬೊಮ್ಮಾಯಿ ಸಭೆ

Prasthutha|

- Advertisement -

ಬೆಂಗಳೂರು: ಚುನಾವಣೆಯ ಫಲಿತಾಂಶದ ಬಳಿಕ ಹಂಗಾಮಿ ಸಿಎಂ ಬಸವರಾಜ ಬೊಮ್ಮಾಯಿ‌ ಅವರು ಆರ್ ಎಸ್ ಎಸ್ ನಾಯಕರೊಂದಿಗೆ ಪಕ್ಷ ಸಂಘಟನೆ ಬಗ್ಗೆ ಚರ್ಚೆ ನಡೆಸಿದ್ದಾರೆ.

ಈ ಬಗ್ಗೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಕೇಶವ ಕೃಪದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇಂದು ಆರ್ ಎಸ್ ಎಸ್ ಮುಖಂಡರೊಂದಿಗೆ ಚುನಾವಣೆ ಫಲಿತಾಂಶದ ಬಗ್ಗೆ ಚರ್ಚೆ ಮಾಡಿದ್ದೇವೆ. ಬರುವಂತಹ ದಿನಗಳಲ್ಲಿ ಪಕ್ಷವನ್ನು ಮುಂದೆ ಹೇಗೆ ಸಂಘಟಿಸಬೇಕು ಎಂಬುದರ ಬಗ್ಗೆ ಚರ್ಚೆ ಆಗಿದೆ.‌ ರಾಜ್ಯಾಧಕ್ಷರು, ವರಿಷ್ಠರ ಜೊತೆಗೆ ಹಲವಾರು ಬಾರಿ ಚರ್ಚಿಸಿ ಭಾರತೀಯ ಜನತಾ ಪಕ್ಷವನ್ನು ಹೇಗೆ ಸಂಘಟನೆ ಮಾಡಬೇಕು ಎನ್ನುವ ತೀರ್ಮಾನ ಮಾಡುತ್ತೇವೆ ಎಂದರು.

- Advertisement -

ಚುನಾವಣೆಯಲ್ಲಿ ಗೆಲುವು ಸಾಧಿಸಿದ ಶಾಸಕರ ಸಭೆಯನ್ನು ಕರೆದಿಲ್ಲ. ಶಾಸಕರ ಸಭೆಯನ್ನು ರಾಜ್ಯಾಧಕ್ಷರು ಕರೆಯಲಿದ್ದಾರೆ ಎಂದರು.



Join Whatsapp