ಬೀದರ್ : ಆರ್ ಎಸ್ ಎಸ್ ಸಮಾವೇಶ ಕಾರ್ಯಕ್ರಮ ನಡೆಸಲು ಮೊರಾರ್ಜಿ ಸರ್ಕಾರಿ ವಸತಿ ಶಾಲೆಯಲ್ಲಿ ಅನುವು ಮಾಡಿ ಕೊಟ್ಟ ಸರ್ಕಾರದ ನಿರ್ಧಾರವನ್ನು ವಿರೋಧಿಸಿ ದಲಿತ ಸಂಘಟನೆಗಳು ಬುಧವಾರ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಿದವು.
ಆರ್ ಎಸ್ ಎಸ್ ಸಮಾವೇಶ ನಡೆಸಲು ಮೊರಾರ್ಜಿ ಸರ್ಕಾರಿ ವಸತಿ ಶಾಲೆಯಲ್ಲಿ ಬಿಜೆಪಿ ಸರ್ಕಾರ ಅನುಮತಿ ನೀಡಿದ್ದು, ಸರ್ಕಾರದ ಈ ನೀತಿಯ ವಿರುದ್ಧ ದಲಿತ ಸಂಘಟನೆಗಳು ಬುಧವಾರ ಜಿಲ್ಲಾಧಿಕಾರಿಗಳ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.
ಸರ್ಕಾರದ ನಡೆಯನ್ನು ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸಮರ್ಥಿದ್ದು, ವಸತಿ ಶಾಲೆಗಳಲ್ಲಿ ಮಕ್ಕಳ ವ್ಯಕ್ತಿತ್ವ ವಿಕಸನ, ರಾಷ್ಟ್ರದ ಪರವಾಗಿ ಕಲಿಕಾ ಶಿಬಿರ ಆಯೋಜನೆ ಬಯಸಿ ಆರ್ ಎಸ್ ಎಸ್ ಅರ್ಜಿ ಸಲ್ಲಿಸಿದರೂ ಪರಿಶೀಲಿಸುತ್ತೇವೆ. ಅದರಲ್ಲಿ ತಪ್ಪೇನಿದೆ? ಎಂದು ಕೇಳಿದ್ದಾರೆ.
ಇತ್ತೀಚಿಗೆ ಗದಗ ಶಾಲೆಯಲ್ಲಿ ಪ್ರವಾದಿಯವರ ಕುರಿತು ಪ್ರಬಂಧ ಸ್ಪರ್ಧೆ ಏರ್ಪಡಿಸಿದ್ದಕ್ಕಾಗಿ ಹಿಂದೂ ಕಾರ್ಯಕರ್ತರು ಶಾಲೆಗೆ ನುಗ್ಗಿ ದಾಂಧಲೆವೆಬ್ಬಿಸಿ ಶಾಲಾ ಪ್ರಾಂಶುಪಾಲರನ್ನು ಅಮಾನತು ಮಾಡಿದ್ದನ್ನು ಇಲ್ಲಿ ಸ್ಮರಿಸಬಹುದು.