ಆರೆಸ್ಸೆಸ್ ಸಂಸ್ಥಾಪಕ ಹೆಡಗೇವಾರ್ ಪಠ್ಯ ಕೈಬಿಡುವುದಿಲ್ಲ: ಮುಖ್ಯಮಂತ್ರಿ ಬೊಮ್ಮಾಯಿ

Prasthutha|

►ರೋಹಿತ್ ಚಕ್ರತೀರ್ಥ ನೇತೃತ್ವದ ಸಮಿತಿಯನ್ನು ವಿಸರ್ಜನೆ ಮಾಡಲಾಗಿದೆಯೇ ಹೊರತು ರದ್ದು ಮಾಡಿಲ್ಲ ಎಂದ ಸಿಎಂ

- Advertisement -

ಚಿತ್ರದುರ್ಗ: ಆರ್ ಎಸ್ ಎಸ್ ಸಂಸ್ಥಾಪಕ ಕೇಶವ ಬಲಿರಾಮ್ ಹೆಡಗೇವಾರ್ ಪಠ್ಯವನ್ನು ಕೈಬಿಡುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಹಿರಿಯೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೋಹಿತ್ ಚಕ್ರತೀರ್ಥ ನೇತೃತ್ವದ ಪಠ್ಯಪುಸ್ತಕ ಸಮಿತಿ ಕಾರ್ಯ ಮುಗಿದಿದೆ. ಹೀಗಾಗಿ ಅದನ್ನು ವಿಸರ್ಜನೆ ಮಾಡಲಾಗಿದೆಯೇ ಹೊರತು ರದ್ದು ಮಾಡಿಲ್ಲ. ಹೊಸ ಸಮಿತಿ ರಚನೆಯ ಅವಶ್ಯಕತೆ ಇಲ್ಲ ಎಂದು ತಿಳಿಸಿದರು.

- Advertisement -

ಪಠ್ಯಪುಸ್ತಕ ವಿಚಾರದಲ್ಲಿ ಚರ್ಚೆ ನಡೆದ ಬಳಿಕ ಪರಿಶೀಲಿಸುವುದಾಗಿ ಆರಂಭದಲ್ಲೇ ಹೇಳಿದ್ದೆ. ವಾಸ್ತವಾಂಶದ ಆಧಾರದ ಮೇರೆಗೆ ಕೆಲ ಬದಲಾವಣೆ ಮಾಡಲಾಗುತ್ತಿದೆ. ಮಠಾಧೀಶರ ಒತ್ತಡಕ್ಕೆ ಮಣಿದು ಈ ತೀರ್ಮಾನ ಕೈಗೊಂಡಿಲ್ಲ ಎಂದು ಸ್ಪಷ್ಪಪಡಿಸಿದರು.

Join Whatsapp
Exit mobile version