ಅಪ್ರಾಪ್ತ ಮಗಳನ್ನೇ ಅತ್ಯಾಚಾರಗೈದ ಆರ್‌ಎಸ್‌ಎಸ್‌ ಮುಖಂಡ

Prasthutha: June 27, 2021

ಮಧ್ಯಪ್ರದೇಶ: ತನ್ನ ಅಪ್ರಾಪ್ತ ಮಗಳ ಮೇಲೆಯೇ ಆರ್‌ಎಸ್‌ಎಸ್‌ ಮುಖಂಡನೊಬ್ಬ ಅತ್ಯಾಚಾರ ಎಸಗಿರುವ ಅಮಾನವೀಯ ಘಟನೆ ಮಧ್ಯಪ್ರದೇಶದ ಪೊವಾಯ್ ಪೊಲೀಸ್ ಠಾಣಾ ವ್ಯಾಪ್ತಿಯ ಮುದ್ವಾರಿ ಗ್ರಾಮದಲ್ಲಿ ನಡೆದಿದೆ. ಹೇಯ ಕೃತ್ಯ ನಡೆಸಿದ ಆರೋಪಿಯನ್ನು ಬಿಜೆಪಿ ಮತ್ತು ಆರ್‌ಎಸ್‌ಎಸ್ ಮುಖಂಡ ಸತೀಶ್ ಮಿಶ್ರಾ ಎಂದು ಗುರುತಿಸಲಾಗಿದೆ.

ಘಟನೆ ಬಗ್ಗೆ 17 ವರ್ಷದ ಮಗಳು ಪೊಲೀಸರಿಗೆ ದೂರು ನೀಡಿದ್ದಾಳೆ. ಬಾಲಕಿಯ ದೂರಿನ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿ ಆರೋಪಿಯನ್ನು ಬಂಧಿಸಿದ್ದಾರೆ.

ಆರೋಪಿಯು ಬಿಜೆಪಿ ರಾಜ್ಯಾಧ್ಯಕ್ಷ ವಿ.ಡಿ.ಶರ್ಮಾ ಸೇರಿದಂತೆ ಇತರ ಹಿರಿಯ ಬಿಜೆಪಿ ನಾಯಕರೊಂದಿಗೆ ಇರುವ ಚಿತ್ರಗಳನ್ನು ಟ್ವಿಟ್ಟರ್ ನಲ್ಲಿ ಹಂಚಿಕೊಂಡ ಕಾಂಗ್ರೆಸ್, ಆರ್‌ಎಸ್‌ಎಸ್ ಕಾರ್ಯಕರ್ತ ಮತ್ತು ಬಿಜೆಪಿ ಮುಖಂಡ ಸತೀಶ್ ಮಿಶ್ರಾ ತಮ್ಮ ಸ್ವಂತ ಮಗಳ ಮೇಲೆ ಅತ್ಯಾಚಾರ ಮಾಡಿದ್ದಾನೆ. ಆರ್‌ಎಸ್‌ಎಸ್ ಮತ್ತು ಬಿಜೆಪಿಯ ಅಸಹ್ಯಕರ ಮುಖ ರಾಜ್ಯದ ಪನ್ನಾ ಜಿಲ್ಲೆಯಲ್ಲಿ ಬಯಲಾಗಿದೆ. ಮುಖ್ಯಮಂತ್ರಿ ಶಿವರಾಜ್ ಸಿಂಗ್ ಅವರೇ, ಇದು ರಾಕ್ಷಸೀ ಪ್ರವೃತ್ತಿಗಿಂತಲೂ ಹೇಯ ಕೃತ್ಯ ಎಂದು ಬರೆದಿದೆ.

ನಿಮ್ಮ ಚಂದಾ ಹಣ ಪಾವತಿಸಲು ಈ ಕೆಳಗಿನ ಬಟನ್ ಮೇಲೆ ಕ್ಲಿಕ್ ಮಾಡಿ.

ಜನಪರ ಪತ್ರಿಕೋದ್ಯಮವನ್ನು ಬೆಂಬಲಿಸಿ
ಪ್ರಸ್ತುತದ ಬೆಳವಣಿಗೆಯಲ್ಲಿ ಪಾಲುದಾರರಾಗಿ
ಜನಸಾಮಾನ್ಯರ ಜ್ವಲಂತ ಸಮಸ್ಯೆಗಳಿಗೆ ಸದಾ ಮಿಡಿಯುತ್ತಾ, ಧ್ವನಿ ಇಲ್ಲದ ಸಮುದಾಯಗಳ ಧ್ವನಿಯಾಗುತ್ತಾ ಮಾಧ್ಯಮ ಲೋಕದಲ್ಲಿ ಸ್ವತಂತ್ರವಾಗಿ ಕಾರ್ಯಾಚರಿಸುತ್ತಿರುವ ಪ್ರಸ್ತುತಕ್ಕೆ ನಿಮ್ಮ ಪ್ರೋತ್ಸಾಹ, ಬೆಂಬಲ ಯಾವತ್ತೂ ಇರಲಿ. ಪ್ರಸ್ತುತಕ್ಕೆ ದೇಣಿಗೆ ನೀಡಲು ಬಯಸುವವರು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಹಣವನ್ನು ಪಾವತಿಸಬಹುದು.

ಧನ್ಯವಾದಗಳು

ಟಾಪ್ ಸುದ್ದಿಗಳು

ವಿಶೇಷ ವರದಿ