ಸರ್ಕಾರಿ ಉದ್ಯೋಗಿಗಳಿಗೆ RSS ನಿಷೇಧ ತೆರವು: ಅಧಿಕಾರಶಾಹಿಗಳು ಚಡ್ಡಿಯಲ್ಲಿ ಬರಬಹುದು ಎಂದು ಕಾಂಗ್ರೆಸ್ ಲೇವಡಿ

Prasthutha|

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಇತ್ತೀಚೆಗೆ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್ ಎಸ್ ಎಸ್) ಮತ್ತು ಅದರ ಚಟುವಟಿಕೆಗಳೊಂದಿಗೆ ಸಂಬಂಧ ಹೊಂದಿರುವ ಸರ್ಕಾರಿ ನೌಕರರ ಮೇಲಿನ ಹಲವು ದಶಕಗಳ ಹಿಂದಿನ ನಿಷೇಧವನ್ನು ತೆಗೆದುಹಾಕಿದೆ.

- Advertisement -


ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್, ಜುಲೈ 9ರಂದು ಸಿಬ್ಬಂದಿ ಮತ್ತು ತರಬೇತಿ ಇಲಾಖೆ ಹೊರಡಿಸಿದ ಆದೇಶವನ್ನು ಜೈರಾಮ್ ರಮೇಶ್ ಹಂಚಿಕೊಂಡಿದ್ದಾರೆ. 1966ರಿಂದ ಜಾರಿಯಲ್ಲಿದ್ದ ಆರ್ ಎಸ್ ಎಸ್ ಚಟುವಟಿಕೆಗಳಲ್ಲಿ ಸರ್ಕಾರಿ ಸಿಬ್ಬಂದಿ ಭಾಗವಹಿಸುವ ನಿಷೇಧವನ್ನು ತೆಗೆದುಹಾಕಲಾಗಿದೆ ಎಂದು ಹೇಳಿದ್ದಾರೆ.


ಆರ್ ಎಸ್ ಎಸ್ ಸದಸ್ಯ ನಾಥೂರಾಂ ಗೋಡ್ಸೆ ಮಹಾತ್ಮ ಗಾಂಧಿಯನ್ನು ಹತ್ಯೆ ಮಾಡಿದ ನಂತರ ಅದರ ಚಟುವಟಿಕೆಗಳ ಮೇಲಿನ ಕಳವಳದಿಂದಾಗಿ ಆರ್ ಎಸ್ ಎಸ್ ಅನ್ನು 1948ರಲ್ಲಿ ಕಾನೂನುಬಾಹಿರ ಸಂಘಟನೆ ಎಂದು ಘೋಷಿಸಲಾಯಿತು. 1948ರ ಫೆಬ್ರುವರಿಯಲ್ಲಿ ಗಾಂಧೀಜಿಯವರ ಹತ್ಯೆಯ ನಂತರ ಸರ್ದಾರ್ ಪಟೇಲ್ ಅವರು ಆರ್ ಎಸ್ ಎಸ್ ಅನ್ನು ನಿಷೇಧಿಸಿದ್ದರು. ನಂತರ ಉತ್ತಮ ನಡವಳಿಕೆಯ ಭರವಸೆಯ ಮೇರೆಗೆ ಈ ನಿಷೇಧವನ್ನು ಹಿಂಪಡೆಯಲಾಯಿತು. ಇದಾದ ನಂತರವೂ ಆರ್ ಎಸ್ ಎಸ್ ನಾಗಪುರದಲ್ಲಿ ತಿರಂಗಾವನ್ನು ಹಾರಿಸಲಿಲ್ಲ ಎಂದು ಜೈರಾಮ್ ರಮೇಶ್ ಹೇಳಿದ್ದಾರೆ.
“ಅಧಿಕಾರಶಾಹಿಗಳು ಈಗ ಚಡ್ಡಿಗಳಲ್ಲಿ ಬರಬಹುದು ಎಂದು ನನಗೆ ಅನಿಸುತ್ತಿದೆ” ಎಂದಿರುವ ಜೈರಾಮ್ ರಮೇಶ್, ಖಾಕಿ ಬಣ್ಣದ ಆರ್ ಎಸ್ ಎಸ್ ಚಡ್ಡಿಯ ಸಮವಸ್ತ್ರವನ್ನು ಪ್ರಸ್ತಾಪಿಸಿದ್ದಾರೆ.

- Advertisement -

“ಜೂನ್ 4, 2024ರ ನಂತರ ಸ್ವಘೋಷಿತ ಅಜೈವಿಕ ಪ್ರಧಾನ ಮಂತ್ರಿ ಹಾಗೂ ಆರ್ ಎಸ್ ಎಸ್ ನಡುವಿನ ಸಂಬಂಧ ಹದಗೆಟ್ಟಿತು. ಜುಲೈ 9, 2024ರಂದು ವಾಜಪೇಯಿ ಪ್ರಧಾನಿಯಾಗಿದ್ದಾಗಲೂ ಜಾರಿಯಲ್ಲಿದ್ದ 58 ವರ್ಷಗಳ ನಿಷೇಧವನ್ನು ಹಿಂಪಡೆಯಲಾಗಿದೆ. ಇನ್ನು ಮುಂದೆ ಸರಕಾರಿ ಅಧಿಕಾರಿಗಳು ಚೆಡ್ಡಿಯಲ್ಲೇ ಕಚೇರಿಗಳಿಗೆ ಬರಲೂಬಹುದು” ಎಂದು ಜೈರಾಮ್ ರಮೇಶ್ ವ್ಯಂಗ್ಯವಾಡಿದ್ದಾರೆ.

ಕಾಂಗ್ರೆಸ್ ಪಕ್ಷದ ಮಾಧ್ಯಮ ಹಾಗೂ ಪ್ರಚಾರ ವಿಭಾಗದ ಮುಖ್ಯಸ್ಥ ಪವನ್ ಖೇರಾ ಕೂಡಾ ಈ ಕ್ರಮವನ್ನು ಖಂಡಿಸಿದ್ದಾರೆ.



Join Whatsapp