Home ಟಾಪ್ ಸುದ್ದಿಗಳು ಎಲ್ಲ ವಿಶ್ವವಿದ್ಯಾಲಯಗಳಲ್ಲಿ RSS ನವರೇ ಸಿಂಡಿಕೇಟ್ ಸದಸ್ಯರಾಗಿದ್ದಾರೆ: ಕುಮಾರಸ್ವಾಮಿ ಗಂಭೀರ ಆರೋಪ

ಎಲ್ಲ ವಿಶ್ವವಿದ್ಯಾಲಯಗಳಲ್ಲಿ RSS ನವರೇ ಸಿಂಡಿಕೇಟ್ ಸದಸ್ಯರಾಗಿದ್ದಾರೆ: ಕುಮಾರಸ್ವಾಮಿ ಗಂಭೀರ ಆರೋಪ

ರಾಮನಗರ: ಎಲ್ಲ ವಿಶ್ವವಿದ್ಯಾಲಯಗಳಲ್ಲಿ ಆರ್ ಎಸ್ ಎಸ್ ನವರೇ ಸಿಂಡಿಕೇಟ್ ಸದಸ್ಯರಾಗಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ.


ಇಂದು ಚನ್ನಪಟ್ಟಣದಲ್ಲಿ ಮಾತನಾಡಿದ ಅವರು, ಇವತ್ತು ಎಲ್ಲ ವಿಶ್ವವಿದ್ಯಾನಿಲಯಗಳಲ್ಲಿ ಆರ್ ಎಸ್ ಎಸ್ ನ ಕಾರ್ಯಕರ್ತರನ್ನು ಸಿಂಡಿಕೇಟ್ ಮೆಂಬರ್ ಮಾಡಿಕೊಂಡಿದ್ದಾರೆ. ಕೆಲಸ ಆಗಲು ಒಂದು ಎರಡು ಲಕ್ಷ ರೂಪಾಯಿ ಡಿಮ್ಯಾಂಡ್ ಇಟ್ಟಿದ್ದಾರೆ ಎಂದು ಆರೋಪಿಸಿದ್ದಾರೆ.


ಆರ್ ಎಸ್ ಎಸ್ ವಿರುದ್ಧ ಇತ್ತೀಚೆಗೆ ಗಂಭೀರ ಆರೋಪಗಳನ್ನು ಮಾಡುತ್ತಾ ಬಂದಿರುವ ಕುಮಾರಸ್ವಾಮಿ ಅವರು ಇಂದು ಮತ್ತೆ ಹೊಸ ಬಾಂಬ್ ಸಿಡಿಸಿದ್ದಾರೆ.

Join Whatsapp
Exit mobile version