ಬೆಂಗಳೂರು: ಸಂಘಪರಿವಾರದವರಿಗೆ ಖುರ್ಚಿಯ ವ್ಯಾಮೋಹವಿಲ್ಲ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಹೇಳಿದ್ದಾರೆ.
ವಿಕಾಸಸೌಧದ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಂ.ಪಿ.ರೇಣುಕಾಚಾರ್ಯ, ಆರ್ ಎಸ್ ಎಸ್ ಬಗ್ಗೆ ಕಳೆದ ಒಂದು ವಾರದಿಂದ ಚರ್ಚೆಯಾಗುತ್ತಿದೆ. ಹೆಚ್.ಡಿ.ಕುಮಾರಸ್ವಾಮಿ ಹಾಗೂ ಸಿದ್ದರಾಮಯ್ಯರಿಗೆ ಸಂಘಪರಿವಾರದ ಬಗ್ಗೆ ಮಾತನಾಡುವ ನೈತಿಕ ಹಕ್ಕಿಲ್ಲ. ಘಪರಿವಾರದವರಿಗೆ ಕುರ್ಚಿ ವ್ಯಾಮೋಹವಿಲ್ಲ. ಕುರ್ಚಿಗಾಗಿ ಎಂದೂ ಹೋರಾಡಿಲ್ಲ. ಸಮಾಜಸೇವೆಗಾಗಿ ಸಂಘ ಸಮರ್ಪಣೆ ಮಾಡಿಕೊಂಡಿದೆ. ದೇಶಕ್ಕಾಗಿ ತ್ಯಾಗ ಬಲಿದಾನ ಮಾಡುತ್ತಿದೆ. ಕುರ್ಚಿ ವ್ಯಾಮೋಹ ಜೆಡಿಎಸ್, ಕಾಂಗ್ರೆಸ್ಸಿಗಿದೆ. ಅಲ್ಪಸಂಖ್ಯಾತರ ಉದ್ಧಾರಕರು ಎಂದು ಹೇಳಿಕೊಳ್ಳುತ್ತಾರಷ್ಟೆ. ಸಿದ್ದರಾಮಯ್ಯ ಟಿಪ್ಪುಜಯಂತಿ ಮಾಡಿ ವೋಟ್ ಬ್ಯಾಂಕ್ ರಾಜಕಾರಣ ಮಾಡಿದ್ದರು. ಅಲ್ಪಸಂಖ್ಯಾತರಿಗೂ ಇಂದು ಸಿದ್ದರಾಮಯ್ಯ ಇವರ ಬಂಡವಾಳ ಗೊತ್ತಾಗಿದೆ. ಇವರೆಲ್ಲ ವೋಟ್ ಬ್ಯಾಂಕ್ ಗಾಗಿಸಂಘದ ಬಗ್ಗೆ ಹೇಳಿಕೆ ನೀಡುತ್ತಿದ್ದಾರೆ ಎಂದು ಎಂ.ಪಿ.ರೇಣುಕಾಚಾರ್ಯ ಹೇಳಿದರು.
ಇದೇ ವೇಳೆ ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು,ಬಿಜೆಪಿ ಪಕ್ಷದಲ್ಲಿ ಬಿ.ಎಸ್.ಯಡಿಯೂರಪ್ಪನವರನ್ನು ಸೈಡ್ ಲೈನ್ ಮಾಡಿಲ್ಲ. ಐಟಿ ರೇಡ್ ಗೂ ಯಡಿಯೂರಪ್ಪಗೂ ಸಂಬಂಧವಿಲ್ಲ. ಸತ್ಯಾಂಶ ಹೊರಬರಲಿದೆ ಎಂದರು.