Home ಟಾಪ್ ಸುದ್ದಿಗಳು ದೇಶ ವಿಭಜನೆಗೆ ಆರೆಸ್ಸೆಸ್ ಕಾರಣ: ಎಸ್.ಬಿ.ಎಸ್.ಪಿ ಮುಖ್ಯಸ್ಥ ಓಂ ಪ್ರಕಾಶ್ ರಾಜ್ ಭರ್

ದೇಶ ವಿಭಜನೆಗೆ ಆರೆಸ್ಸೆಸ್ ಕಾರಣ: ಎಸ್.ಬಿ.ಎಸ್.ಪಿ ಮುಖ್ಯಸ್ಥ ಓಂ ಪ್ರಕಾಶ್ ರಾಜ್ ಭರ್

ಲಕ್ನೋ: ದೇಶ ವಿಭಜನೆಯಾಗಲು ಆರೆಸ್ಸೆಸ್ ನೇರ ಕಾರಣವೆಂದು SBSP ಮುಖ್ಯಸ್ಥ ಓಂ ಪ್ರಕಾಶ್ ರಾಜ್ ಭರ್ ಆರೋಪಿಸಿದ್ದಾರೆ.
ಮಾತ್ರವಲ್ಲ ಮುಹಮ್ಮದ್ ಅಲಿ ಜಿನ್ನಾ ಅವರನ್ನು ಭಾರತದ ಪ್ರಧಾನಿಯನ್ನಾಗಿ ಮಾಡಿದ್ದರೆ ದೇಶ ವಿಭಜನೆಯಾಗುತ್ತಿರಲಿಲ್ಲ ಮತ್ತು ದೇಶ ಬೃಹತ್ ಶಕ್ತಿಯಾಗಿ ಹೊರಹೊಮ್ಮುತ್ತಿತ್ತು ಎಂದು ಹೇಳಿಕೆ ನೀಡಿ ಅವರು ಸಂಚಲನ ಮೂಡಿಸಿದ್ದಾರೆ.

ಸುದ್ದಿಗಾರರೊಂದಿಗೆ ಗುರುವಾರ ಮಾತನಾಡಿದ ಅವರು, ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ಜಿನ್ನಾ ಅವರು ನೀಡಿದ ಕೊಡುಗೆಯನ್ನು ಅಟಲ್ ಬಿಹಾರಿ ವಾಜಪೇಯಿ, ಎಲ್.ಕೆ. ಅಡ್ವಾಣಿ ಮತ್ತು ಗೋವಿಂದ್ ಬಲ್ಲಭ್ ಪಂತ್ ಅವರಂತಹ ಬಿಜೆಪಿ ನಾಯಕರು ಶ್ಲಾಘಿಸಿದ್ದಾರೆ ಎಂದು ಓಂ ಪ್ರಕಾಶ್ ತಿಳಿಸಿದ್ದಾರೆ.

ದೇಶಕ್ಕಾಗಿ ಹೋರಾಡಿದ ಜಿನ್ನಾ ಅವರನ್ನು ಸ್ವಾತಂತ್ರ್ಯ ಭಾರತದ ಮೊದಲ ಪ್ರಧಾನಿಯನ್ನಾಗಿ ಮಾಡಬೇಕಿತ್ತು ಎಂದು ಪ್ರಕಾಶ್ ಪ್ರತಿಪಾದಿಸಿದರು.

ಉತ್ತರ ಪ್ರದೇಶ ಹರ್ದೋಯ್ ನಲ್ಲಿ ನಡೆದ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಅಖಿಲೇಶ್ ಯಾದವ್, ಸರ್ದಾರ್ ಪಟೇಲ್, ಮಹಾತ್ಮ ಗಾಂಧಿ, ಜವಹರಲಾಲ್ ನೆಹರು ಮತ್ತು ಮುಹಮ್ಮದ್ ಅಲಿ ಜಿನ್ನಾ ಒಂದೇ ಸಂಸ್ಥೆಯಲ್ಲಿ ವಿದ್ಯಾಬ್ಯಾಸಗೈದು ಬ್ಯಾರಿಸ್ಟರ್ ಗಳಾದರು. ಮಾತ್ರವಲ್ಲ ಸ್ವಾತಂತ್ರ್ಯ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದರು ಎಂದು ಸಾಂದರ್ಭಿಕವಾಗಿ ಹೇಳಿದ್ದರು.

Join Whatsapp
Exit mobile version