ಮುಖ್ಯಮಂತ್ರಿ ಸ್ಥಾನದಿಂದ ಯಡಿಯೂರಪ್ಪರನ್ನು ಬದಲಿಸಲು ಆರೆಸ್ಸೆಸ್ ಬಯಸಿದೆ : ಸಿದ್ದರಾಮಯ್ಯ ಹೊಸ ಬಾಂಬ್ !

Prasthutha|

ರಾಯಚೂರು: ‘ಬಸನಗೌಡ ಯತ್ನಾಳ ಹಾಗೂ ಈಶ್ವರಪ್ಪ ಅವರಿಗೆ ಆರೆಸ್ಸೆಸ್ ಮತ್ತು ಸಂತೋಷ್ ಬೆಂಬಲ ಇದೆ. ಮುಖ್ಯಮಂತ್ರಿ ಬಿಎಸ್‌ವೈ ಬದಲಿಸಲು ಆರೆಸ್ಸೆಸ್ ಬಯಸಿದೆ’ ಎಂದು ಮಾಜಿ ಮುಖ್ಯಮಂತ್ರಿ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೊಸ ಬಾಂಬ್ ಸಿಡಿಸಿ ರಾಜಕಾರಣದಲ್ಲಿ ಹೊಸ ಸಂಚಲನ ಸೃಷ್ಟಿಸಿದ್ದಾರೆ.


ಮಸ್ಕಿ ಉಪಚುನಾವಣೆ ಪ್ರಚಾರಕ್ಕಾಗಿ ಆಗಮಿಸಿರುವ ಅವರು ಮಂಗಳವಾರ ಪಗಡದಿನ್ನಿ ಕ್ಯಾಂಪ್‌ನಲ್ಲಿ ಸುದ್ದಿಗಾರೊಂದಿಗೆ ಮಾತನಾಡುತ್ತಾ, ‘ಸರ್ಕಾರಕ್ಕೆ ಸಮಸ್ಯೆಗಳನ್ನು ನಿಭಾಯಿಸುವ ಶಕ್ತಿಯಿಲ್ಲ. ಸಚಿವ ಈಶ್ವರಪ್ಪ ಬರೆದ ಪತ್ರ ಗಂಭೀರ ವಿಚಾರ. ಬಸನಗೌಡ ಯತ್ನಾಳ ನಾಲ್ಕು ತಿಂಗಳಿಂದ ವಾಗ್ದಾಳಿ ಮಾಡುತ್ತಿದ್ದರೂ ಏಕೆ ಕ್ರಮ ಕೈಗೊಂಡಿಲ್ಲ. ಮಂತ್ರಿ ಮಂಡಲದಲ್ಲಿ ಎಲ್ಲವೂ ಸರಿ ಇಲ್ಲ’ ಎಂದು ಹೇಳಿ ಬಿಜೆಪಿ ಸರಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

- Advertisement -