Home ಟಾಪ್ ಸುದ್ದಿಗಳು ಮುಸ್ಲಿಂ ಮಹಿಳೆಯರ ವಿರುದ್ಧ ಅವಹೇಳನಕಾರಿ ಪೋಸ್ಟ್: RSS ಕಾರ್ಯಕರ್ತನ ಬಂಧನ

ಮುಸ್ಲಿಂ ಮಹಿಳೆಯರ ವಿರುದ್ಧ ಅವಹೇಳನಕಾರಿ ಪೋಸ್ಟ್: RSS ಕಾರ್ಯಕರ್ತನ ಬಂಧನ

ರಾಯಚೂರು: ಲಿಂಗಸುಗೂರಿನಲ್ಲಿ RSS ಕಾರ್ಯಕರ್ತನೋರ್ವ ಮುಸ್ಲಿಂ ಮಹಿಳೆಯರ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆತನನ್ನು ಪೊಲೀಸರು ಬಂಧಿಸಿದ್ದಾರೆ.


ರಾಜು ತಂಬಾಕೆ ಬಂಧಿತ ಆರ್ ಎಸ್ ಎಸ್ ಕಾರ್ಯಕರ್ತ.


ರಾಜು ತನ್ನ ಮೊಬೈಲ್ ನಲ್ಲಿ ಅವಹೇಳನಕಾರಿ ಸ್ಟೇಟಸ್ ಹಾಕಿದ್ದು ಆಕ್ರೋಶಕ್ಕೆ ಕಾರಣವಾಗಿದೆ. ಪರಿಸ್ಥಿತಿ ಗಂಭೀರಗೊಳ್ಳುತ್ತಿದ್ದಂತೆ ಪ್ರಕರಣ ದಾಖಲಿಸಿಕೊಂಡ ಪೋಲೀಸರು ಆರೋಪಿಯನ್ನ ಬಂಧಿಸಿದ್ದಾರೆ.


ಲಿಂಗಸುಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿ ರಾಜು ತಂಬಾಕೆಯನ್ನ ನ್ಯಾಯಾಂಗ ಬಂಧನಕ್ಕೆ ಪೊಲೀಸರು ಒಪ್ಪಿಸಿದ್ದಾರೆ.

Join Whatsapp
Exit mobile version