ನಿವೃತ್ತ ಐಎಎಸ್ ಅಧಿಕಾರಿ ಸಯ್ಯದ್ ಝಮೀರ್ ಪಾಶಾ ನಿಧನ

Prasthutha|

ಬೆಂಗಳೂರು : ನಿವೃತ್ತ ಐಎಸ್ ಅಧಿಕಾರಿ ಮತ್ತು ಕಾಂಗ್ರೆಸ್ ನಾಯಕ ಸಯ್ಯದ್ ಝಮೀರ್ ಪಾಶಾ ಬುಧವಾರ ಸಂಜೆ ನಿಧನರಾಗಿದ್ದಾರೆ. ತಮ್ಮ ಬೆಂಗಳೂರು ನಿವಾಸದಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ.

- Advertisement -

67ರ ಹರೆಯದ ಝಮೀರ್ ಪಾಶಾ ಐಎಎಸ್ ಅಧಿಕಾರಿಯಾಗಿ ಬೆಂಗಳೂರು ಮೆಟ್ರೊಪಾಲಿಟನ್ ಟ್ರಾನ್ಸ್ ಪೋರ್ಟ್ ಕಾರ್ಪೊರೇಶನ್ ನಲ್ಲಿ ಆಡಳಿತ ನಿರ್ದೇಶಕರಾಗಿ, ಅಲ್ಪಸಂಖ್ಯಾತ ಅಭಿವೃದ್ಧಿ ಇಲಾಖೆಯ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದರು.

ಝಮೀರ್ ಅವರು ಕಾಂಗ್ರೆಸ್ ಸೇರುವುದಕ್ಕೂ ಮೊದಲು ಸಾಚಾರ್ ಸಮಿತಿ ಶಿಫಾರಸ್ಸುಗಳನ್ನು ಜಾರಿಗೊಳಿಸುವ ಕಾರ್ಯದಲ್ಲಿ ನಿರತರಾಗಿದ್ದರು. 2018ರ ವಿಧಾನಸಭಾ ಚುನಾವಣೆಯಲ್ಲಿ ಕೋಲಾರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಅವರು ಚುನಾವಣೆಗೆ ಸ್ಪರ್ಧಿಸಿದ್ದರಾದರೂ, ಗೆಲುವು ಸಾಧಿಸಲು ಸಾಧ್ಯವಾಗಿರಲಿಲ್ಲ.

Join Whatsapp