ಕೋವಿಡ್ ಆತಂಕ | ಇಂದಿನಿಂದ ದ.ಕ. ಜಿಲ್ಲೆ ಪ್ರವೇಶಿಸಲು RTPCR ವರದಿ ಕಡ್ಡಾಯ

Prasthutha|

ಮಂಗಳೂರು: ಕೋವಿಡ್ ನ ಹೊಸ ರೂಪಾಂತರಿ ಹಿನ್ನೆಲೆಯಲ್ಲಿ ದ.ಕ. ಜಿಲ್ಲೆಯ ಗಡಿಗಳಲ್ಲಿ ತಪಾಸಣೆ ತೀವ್ರಗೊಳಿಸಲಾಗಿದೆ. ಇಂದಿನಿಂದ ದಕ್ಷಿಣ ಕನ್ನಡ ಜಿಲ್ಲೆ ಪ್ರವೇಶಿಸಲು ಆರ್ ಟಿಪಿಸಿಆರ್ ನೆಗಟಿವ್ ವರದಿ ಕಡ್ಡಾಯ ಎಂದು ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ತಿಳಿಸಿದ್ದಾರೆ.

- Advertisement -

ದಕ್ಷಿನ ಕನ್ನಡ ಜಿಲ್ಲೆಯ ಎಲ್ಲಾ ಗಡಿಗಳಲ್ಲೂ ತಪಾಸಣೆ ನಡೆಸಲಾಗುತ್ತಿದ್ದು, ಮೂರು ಪಾಳಿಯಲ್ಲಿ ಸಿಬ್ಬಂದಿಗಳನ್ನು ನೇಮಕಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದ್ದಾರೆ. ನಿತ್ಯ ಪ್ರಯಾಣಿಕರಿಗೆ ತೊಂದರೆಯಾಗದಂತೆ ಕ್ರಮಕೈಗೊಳ್ಳಲಾಗಿದ್ದು, ಅಲ್ಲದೇ ನಿತ್ಯಪ್ರಯಾಣಿಕರಿಗೆ ದ.ಕ. ಜಿಲ್ಲಾಡಳಿತದ ವತಿಯಿಂದ ಆರ್ ಟಿಪಿಸಿಆರ್ ಪರೀಕ್ಷೆಗೂ ಅವಕಾಶ ಕಲ್ಪಿಸಲಾಗಿದೆ ಎಂದಿದ್ದಾರೆ.

ಕೇರಳ ವಿದ್ಯಾರ್ಥಿಗಳ ಸ್ಕ್ರೀನಿಂಗ್ ಮಾಡಲಾಗುತ್ತಿದೆ ಮತ್ತು ಕ್ಯಾಂಪಸ್, ಕಾಲೇಜು ವಿದ್ಯಾರ್ಥಿಗಳ ಸ್ಕ್ರೀನಿಂಗ್ ಗೆ ಸೂಚನೆಯನ್ನು ನೀಡಿದ್ದೇವೆ. , ಜನರಿಗೆ ತೊಂದರೆಯಾಗದಂತೆ, ಸಮಸ್ಯೆಗಳಾಗದಂತೆ ನಿರ್ವಹಣೆ ಮಾಡಬೇಕು. ಯಾರಿಗೂ ತೊಂದರೆಯಾಗದಂತೆ ಪರಿಸ್ಥಿತಿಯನ್ನು ನಿಭಾಯಿಸುತ್ತೇವೆ ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಮಾಹಿತಿ ನೀಡಿದ್ದಾರೆ.

Join Whatsapp