ಕಾಂಗ್ರೆಸ್ ವಿದ್ಯಾರ್ಥಿ ಘಟಕ NSUI ನಾಯಕಿ ರುಚಿ ಗುಪ್ತಾ ರಾಜೀನಾಮೆ

Prasthutha|

ನವದೆಹಲಿ : ಪಕ್ಷದ ಬಂಡಾಯ ನಾಯಕರೊಂದಿಗೆ ಹಿರಿಯ ನಾಯಕಿ ಸೋನಿಯಾ ಗಾಂಧಿ ಮಹತ್ವದ ಮಾತುಕತೆ ನಡೆಸುತ್ತಿರುವ ನಡುವೆಯೇ ಇಂದು, ರಾಹುಲ್ ಗಾಂಧಿ ಆಪ್ತೆ, ಕಾಂಗ್ರೆಸ್ ವಿದ್ಯಾರ್ಥಿ ಘಟಕ ಎನ್ ಎಸ್ ಯುಐ ನಾಯಕಿ ರುಚಿ ಗುಪ್ತಾ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

- Advertisement -

ರುಚಿ ಗುಪ್ತಾ ಎನ್ ಎಸ್ ಯುಐ ಜಂಟಿ ಕಾರ್ಯದರ್ಶಿಯಾಗಿದ್ದರು. ಪಕ್ಷದಲ್ಲಿ ಸಂಘಟನಾತ್ಮಕ ಬದಲಾವಣೆ ತರುವಲ್ಲಿ ವಿಳಂಬವಾಗುತ್ತಿದೆ ಎಂದು ಆಪಾದಿಸಿ ರುಚಿ ಗುಪ್ತಾ ರಾಜೀನಾಮೆ ಸಲ್ಲಿಸಿದ್ದಾರೆ.

“ನಾನು ರಾಜೀನಾಮೆ ನೀಡಿದ್ದೇನೆ ಎಂದು ಘೋಷಿಸಲು ವಿಷಾಧಿಸುತ್ತೇನೆ. ನನಗೆ ಈ ಅವಕಾಶವನ್ನು ನೀಡಿದ ರಾಹುಲ್ ಮತ್ತು ಸೋನಿಯಾ ಅವರಿಗೆ ಆಭಾರಿಯಾಗಿದ್ದೇನೆ” ಎಂದು ಅವರು ಟ್ವೀಟ್ ಮಾಡಿದ್ದಾರೆ.        

Join Whatsapp