ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ

Prasthutha|

ಕೋಲಾರ: ನಗರದ ಹೊರವಲಯದ ನಂದಿನಿ ಪ್ಯಾಲೆಸ್ ನಲ್ಲಿ ನಡೆಯುತ್ತಿದ್ದ ಕಾಂಗ್ರೆಸ್ ಸಭೆಯಲ್ಲಿ ಮಾರಾಮಾರಿ ನಡೆದಿದ್ದು, ಕಾಂಗ್ರೆಸ್ ಮುಖಂಡರು ಪರಸ್ಪರ ಕೈ ಮಿಲಾಯಿಸಿದ್ದಾರೆ.

- Advertisement -


ಕಾಂಗ್ರೆಸ್ ಪಕ್ಷದ ವಿರುದ್ದ ಕೆಲಸ ಮಾಡಿದವರನ್ನು ವೇದಿಕೆ ಮೇಲೆ ಕೂರಿಸಿದ್ದೀರಿ ಎಂದು ಗಲಾಟೆ ಶುರುವಾಗಿದ್ದು, ಇದೇ ವೇಳೆ ಕೆಲ ಕಾರ್ಯಕರ್ತರು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಲಕ್ಷ್ಮೀನಾರಾಯಣ್ ಮೇಲೆ ಕೈ ಮಾಡಿ ಸಭೆಯಿಂದ ಹೊರ ತಳ್ಳಿದ್ದಾರೆ.


ಪರಸ್ಪರ ಗುಂಪುಗಳ ಮಧ್ಯೆ ಮುಖಂಡರು ಕೈ ಕೈ ಮಿಲಾಯಿಸಿದ್ದಾರೆ. ಗುಂಪುಗಳ ಗಲಾಟೆ ಮಧ್ಯೆ ಶಾಸಕರು ಸುಮ್ಮನಾಗಿದ್ದಾರೆ.

- Advertisement -


ಇನ್ನು ಈ ಸಭೆಯಲ್ಲಿ ಶಾಸಕರಾದ ಕೊತ್ತೂರು ಮಂಜುನಾಥ್, ನಂಜೇಗೌಡ, ಕೋಲಾರ ಕಾಂಗ್ರೆಸ್ ಉಸ್ತುವಾರಿ ನಾರಾಯಣಸ್ವಾಮಿ, ಸಿಎಂ ರಾಜಕೀಯ ಕಾರ್ಯದರ್ಶಿ ನಜೀರ್ ಅಹಮದ್ ಭಾಗಿಯಾಗಿದ್ದರು.



Join Whatsapp