ಬೆಂಗಳೂರು: ವಿಧಾನಸಭೆಯ 25ನೇ ಉಪಸಭಾಧ್ಯಕ್ಷರಾಗಿ ರುದ್ರಪ್ಪ ಮಾನಪ್ಪ ಲಮಾಣಿ, ಗುರುವಾರ ಸರ್ವಾನುಮತದಿಂದ ಅವಿರೋಧವಾಗಿ ಆಯ್ಕೆಯಾದರು.
- Advertisement -
ವಿಧಾನಸಭೆಯಲ್ಲಿಂದು ಪ್ರಶ್ನೋತ್ತರ ಅವಧಿಯ ನಂತರ ನಡೆದ ಉಪಸಭಾಧ್ಯಕ್ಷರ ಆಯ್ಕೆ ಪ್ರಕ್ರಿಯೆಯಲ್ಲಿ ರುದ್ರಪ್ಪ ಲಮಾಣಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಸಭಾಧ್ಯಕ್ಷ ಯು.ಟಿ.ಖಾದರ್ ಅವರು ಪ್ರಕಟಿಸಿದರು.