ರಷ್ಯಾ-ದೆಹಲಿ ವಿಮಾನಕ್ಕೆ ಬಾಂಬ್ ಬೆದರಿಕೆ ಇ-ಮೇಲ್: ಪ್ರಯಾಣಿಕರ ಸ್ಥಳಾಂತರ

Prasthutha|

ಹೊಸದಿಲ್ಲಿ: ರಷ್ಯಾದ ಮಾಸ್ಕೋದಿಂದ ದೆಹಲಿಗೆ ಆಗಮಿಸುತ್ತಿದ್ದ ವಿಮಾನದಲ್ಲಿ ಬಾಂಬ್ ಇರಿಸಿರುವುದಾಗಿ ಶುಕ್ರವಾರ ಮುಂಜಾನೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

- Advertisement -

ಈ ಹಿನ್ನೆಲೆಯಲ್ಲಿ ಮುಂಜಾನೆ 3 ರಿಂದ 4 ಗಂಟೆಯ ಮಧ್ಯೆ ದೆಹಲಿ ವಿಮಾನ ನಿಲ್ದಾಣದಲ್ಲಿ ವಿಮಾನ ತುರ್ತು ಲ್ಯಾಂಡ್ ಆಗಿದ್ದು, ವಿಮಾನದಲ್ಲಿದ್ದ 386 ಪ್ರಯಾಣಿಕರು ಮತ್ತು 14 ಸಿಬ್ಬಂದಿಯನ್ನು ತಕ್ಷಣವೇ ಸ್ಥಳಾಂತರಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಕೇಂದ್ರ ಭದ್ರತಾ ಪಡೆಯು ವಿಮಾನದಲ್ಲಿ ಬಾಂಬ್ ಇರಿಸಿರುವ ಕುರಿತ ಬೆದರಿಕೆಯನ್ನು ಇ-ಮೇಲ್ ಮೂಲಕ ಪಡೆದಿದ್ದು, ಘಟನೆಯ ಕುರಿತು ತನಿಖೆಗೆ ಆದೇಶಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

- Advertisement -

ಸದ್ಯ ವಿಮಾನವನ್ನು ಪರಿಶೀಲನೆ ನಡೆಸಲಾಗಿದ್ದು, ಯಾವುದೇ ರೀತಿಯ ಬಾಂಬ್ ಪತ್ತೆಯಾಗಿಲ್ಲ. ವಿಮಾನವನ್ನು ಪ್ರತ್ಯೇಕಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Join Whatsapp