Home ಟಾಪ್ ಸುದ್ದಿಗಳು ಇಂದು ಭಾರತಕ್ಕೆ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್

ಇಂದು ಭಾರತಕ್ಕೆ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್

ನವದೆಹಲಿ: ಇಂದು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಭಾರತಕ್ಕೆ ಆಗಮಿಸಲಿದ್ದಾರೆ. 21ನೇ ಭಾರತ-ರಷ್ಯಾ ವಾರ್ಷಿಕ ಶೃಂಗಸಭೆಯಲ್ಲಿ ಭಾಗವಹಿಸಲಿರುವ ಪುಟಿನ್ ಪ್ರಧಾನಿ ನರೇಂದ್ರ ಮೋದಿ ಜೊತೆ ಮಾತುಕತೆ ನವದೆಹಲಿಯಲ್ಲಿ ನಡೆಸಲಿದ್ದಾರೆ.

ರಕ್ಷಣೆ, ವ್ಯಾಪಾರ, ಹೂಡಿಕೆ, ಇಂಧನ ಮತ್ತು ತಂತ್ರಜ್ಞಾನ ಸಹಿತ ಕೆಲವು ಪ್ರಮುಖ ಕ್ಷೇತ್ರಗಳಲ್ಲಿ ಸಹಕಾರ ಹೆಚ್ಚಿಸಿಕೊಳ್ಳುವ ಒಪ್ಪಂದಕ್ಕೆ ಸಹಿ ಹಾಕಲು ಭಾರತ-ರಷ್ಯಾ ಸಿದ್ಧವಾಗಿವೆ ಎಂದು ಮೂಲಗಳು ತಿಳಿಸಿವೆ. ಸಂಜೆ 5.30ರ ವೇಳೆ ಪ್ರಧಾನಿ ಮೋದಿ ಮತ್ತು ವ್ಲಾಡಿಮಿರ್ ಪುಟಿನ್ ಶೃಂಗ ಮಾತುಕತೆಯನ್ನು ಆರಂಭಿಸಲಿದ್ದಾರೆ ಎಂದು ಭಾರತದ ವಿದೇಶಾಂಗ ವ್ಯವಹಾರಗಳ ಇಲಾಖೆ ಮಾಹಿತಿ ನೀಡಿದೆ.

ಪ್ರಧಾನಿಯೊಂದಿಗಿನ ಶೃಂಗ ಮಾತುಕತೆಯ ಬಳಿಕ ಪುಟಿನ್ ರಾತ್ರಿ9.30ರ ವೇಳೆ ದೆಹಲಿಯಿಂದ ವಾಪಸ್ ತೆರಳಲಿದ್ದಾರೆ. ಕೊರೊನಾ ಸೋಂಕಿನ ಸಾಂಕ್ರಾಮಿಕ ಶುರುವಾದ ಬಳಿಕ ಇದೇ ಮೊದಲ ಬಾರಿಗೆ ನರೇಂದ್ರ ಮೋದಿ ಮತ್ತು ಪುಟಿನ್ ಮುಖಾಮುಖಿ ಭೇಟಿಯಾಗುತ್ತಿದ್ದಾರೆ.

Join Whatsapp
Exit mobile version