Home ಟಾಪ್ ಸುದ್ದಿಗಳು ರಷ್ಯಾ-ಉಕ್ರೇನ್ ಸಂಘರ್ಷ: ಭಾರತೀಯರ ತೆರವು ಕಾರ್ಯಾಚರಣೆಗೆ 26 ವಿಮಾನಗಳ ಹಾರಾಟ

ರಷ್ಯಾ-ಉಕ್ರೇನ್ ಸಂಘರ್ಷ: ಭಾರತೀಯರ ತೆರವು ಕಾರ್ಯಾಚರಣೆಗೆ 26 ವಿಮಾನಗಳ ಹಾರಾಟ

ನವದೆಹಲಿ: ರಷ್ಯಾ-ಉಕ್ರೇನ್ ಯುದ್ಧ ಮುಂದುವರೆದಿದ್ದು, ಮುಂದಿನ ಮೂರು ದಿನಗಳಲ್ಲಿ ಭಾರತೀಯರ ತೆರವು ಕಾರ್ಯಾಚರಣೆಗೆ 26 ವಿಮಾನಗಳ ಹಾರಾಟವನ್ನು ನಿಗದಿಪಡಿಸಲಾಗಿದೆ ಎಂದು ವಿದೇಶಾಂಗ ಸಚಿವಾಲಯದ ಕಾರ್ಯದರ್ಶಿ ಹರ್ಷವರ್ಧನ್ ಶೃಂಗ್ಲಾ ಮಾಹಿತಿ ನೀಡಿದ್ದಾರೆ.

ರಷ್ಯಾ-ಉಕ್ರೇನ್ ಸಂಘರ್ಷದಲ್ಲಿ ಕರ್ನಾಟಕದ ವಿದ್ಯಾರ್ಥಿ ನವೀನ್ ಶೇಖರಪ್ಪ ಗ್ಯಾನಗೌಡರ್ ಮೃತಪಟ್ಟ ಹಿನ್ನೆಲೆಯಲ್ಲಿ ದೇಶಾದ್ಯಂತ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ. ಇದರಿಂದಾಗಿ ‘ಆಪರೇಷನ್ ಗಂಗಾ’ ಕಾರ್ಯಾಚರಣೆಯನ್ನು ಮತ್ತಷ್ಟು ತ್ವರಿತಗೊಳಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ.

ಸಂಘರ್ಷ ವಲಯಗಳಲ್ಲಿ ಸಿಲುಕಿರುವ ಎಲ್ಲಾ ಭಾರತೀಯರ ಸುರಕ್ಷಿತ ತುರ್ತು ತೆರವಿಗೆ ರಷ್ಯಾ ಮತ್ತು ಉಕ್ರೇನ್ ರಾಯಭಾರಿಗಳಲ್ಲಿ ಬೇಡಿಕೆಯನ್ನು ಮುಂದಿರಿಸಿರುವುದಾಗಿ ಅವರು ಹೇಳಿದರು.

ರಷ್ಯಾ-ಉಕ್ರೇನ್ ಬಿಕ್ಕಟ್ಟಿನ ಕುರಿತು ನಡೆದ ಉನ್ನತ ಮಟ್ಟದ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಭಾರತೀಯನ ಸಾವಿನ ಬಗ್ಗೆ ಸಂತಾಪ ವ್ಯಕ್ತಪಡಿಸಿರುವುದಾಗಿ ತಿಳಿಸಿದರು.

Join Whatsapp
Exit mobile version