ರಷ್ಯಾ-ಉಕ್ರೇನ್ ಈ ವಾರ ಶಾಂತಿ ಒಪ್ಪಂದ ಮಾಡಿಕೊಳ್ಳುವ ನಿರೀಕ್ಷೆ ಇದೆ: ಡೊನಾಲ್ಡ್ ಟ್ರಂಪ್

- Advertisement -

ವಾಷಿಂಗ್ಟನ್: ಯುದ್ಧವನ್ನು ಕೊನೆಗೊಳಿಸುವ ನಿಟ್ಟಿನಲ್ಲಿ ರಷ್ಯಾ ಮತ್ತು ಉಕ್ರೇನ್ ಈ ವಾರ ಶಾಂತಿ ಒಪ್ಪಂದ ಮಾಡಿಕೊಳ್ಳಬಹುದು ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಶಾವಾದ ವ್ಯಕ್ತಪಡಿಸಿದ್ದಾರೆ.

- Advertisement -

ತಮ್ಮ ಸಾಮಾಜಿಕ ಮಾಧ್ಯಮ ವೇದಿಕೆ ಟ್ರೂತ್ ಸೋಷಿಯಲ್‌ಗೆ ನೀಡಿದ ಸಂದರ್ಶನದಲ್ಲಿ ಟ್ರಂಪ್, ಎರಡೂ ರಾಷ್ಟ್ರಗಳು ಒಪ್ಪಂದಕ್ಕೆ ಬಂದ ನಂತರ, ಅಮೆರಿಕದೊಂದಿಗೆ ವ್ಯವಹಾರ ಮಾಡುವ ಮೂಲಕ ಎರಡೂ ದೇಶಗಳು ಭವಿಷ್ಯ ರೂಪಿಸಿಕೊಳ್ಳಲು ಸಾಧ್ಯವಾಗುತ್ತದೆ ಎಂದು ಹೇಳಿದರು.

‘ರಷ್ಯಾ ಮತ್ತು ಉಕ್ರೇನ್ ಈ ವಾರ ಒಪ್ಪಂದ ಮಾಡಿಕೊಳ್ಳುವ ನಿರೀಕ್ಷೆ ಇದೆ. ನಂತರ, ಎರಡೂ ಅಭಿವೃದ್ಧಿ ಹೊಂದುತ್ತಿರುವ ದೇಶಗಳು ಅಮೆರಿಕ ಜೊತೆ ದೊಡ್ಡ ವ್ಯವಹಾರವನ್ನು ಮಾಡಲು ಪ್ರಾರಂಭಿಸುತ್ತವೆ ಮತ್ತು ಭವಿಷ್ಯ ರೂಪಿಸಿಕೊಳ್ಳುತ್ತವೆ’ಎಂದು ಟ್ರಂಪ್ ಬರೆದಿದ್ದಾರೆ.

- Advertisement -

ಈ ಮಧ್ಯೆ, ರಷ್ಯಾ ಮತ್ತು ಉಕ್ರೇನ್ ನಡುವಿನ ಶಾಂತಿ ಒಪ್ಪಂದದ ಭಾಗವಾಗಿ ಕ್ರಿಮಿಯಾದ ಮೇಲೆ ರಷ್ಯಾದ ನಿಯಂತ್ರಣವನ್ನು ಗುರುತಿಸಲು ಅಮೆರಿಕ ಸಿದ್ಧವಾಗಿದೆ ಎಂದು ಅಧಿಕಾರಿಯನ್ನು ಉಲ್ಲೇಖಿಸಿ ಸಿಎನ್‌ಎನ್ ವರದಿ ಮಾಡಿದೆ.

- Advertisement -


Must Read

Related Articles