ರಷ್ಯಾ-ಉಕ್ರೇನ್ ಸಂಘರ್ಷ । ಎಲ್ಲಾ ನಾಗರಿಕ ವಿಮಾನಗಳನ್ನು ಸ್ಥಗಿತಗೊಳಿಸಿದ ಉಕ್ರೇನ್

Prasthutha|

ಚಿಕಾಗೊ: ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುತಿನ್ ಅವರು ಉಕ್ರೇನ್ ವಿರುದ್ಧ ಯುದ್ಧಕ್ಕೆ ಕರೆ ನೀಡಿದ ಬೆನ್ನಲ್ಲೇ, ಉಕ್ರೇನ್ ಮೇಲೆ ದಾಳಿ ಆರಂಭವಾಗಿದ್ದು, ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ, ಎಲ್ಲಾ ನಾಗರಿಕ ವಿಮಾನಗಳನ್ನು ಸ್ಥಗಿತಗೊಳಿಸಿ ಆದೇಶ ಹೊರಡಿಸಿದ್ದಾರೆ.

- Advertisement -

ಮಾತ್ರವಲ್ಲ ವೊಲೊಡಿಮಿರ್ ಝೆಲೆನ್ಸ್ಕಿ ಅವರು ರಷ್ಯಾ ವಿರುದ್ಧ ಸಮರ ಘೋಷಿಸಿದ್ದಾರೆ.

ಪ್ರಸಕ್ತ ಬೆಳವಣಿಗೆಯ ಕುರಿತು ಅಮೆರಿಕ ಅಧ್ಯಕ್ಷ ಜೋ ಬೈಡೆನ್ ಪ್ರತಿಕ್ರಿಯಿಸಿ, ರಷ್ಯಾ ನಡೆಸುತ್ತಿರುವ ‘ಪ್ರಚೋದಿತ ಮತ್ತು ನ್ಯಾಯಸಮ್ಮತವಲ್ಲದ ದಾಳಿಯನ್ನು ಖಂಡಿಸಿದ್ದಾರೆ. ಜಾಗತಿಕವಾಗಿ ಈ ಯುದ್ಧಕ್ಕೆ ರಷ್ಯಾವನ್ನು ಹೊಣೆಗಾರರನ್ನಾಗಿ ಮಾಡಲಾಗುವುದೆಂದು ಎಚ್ಚರಿಸಿದ್ದಾರೆ.

- Advertisement -

ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರೆಸ್ ಅವರು ಈ ಕುರಿತು ಪ್ರತಿಕ್ರಿಯಿಸುತ್ತಾ, ಉಕ್ರೇನ್ ಮೇಲಿನ ದಾಳಿ ಮಾಡುವುದನ್ನು ನಿಲ್ಲಿಸುವಂತೆ ರಷ್ಯಾವನ್ನು ಒತ್ತಾಯಿಸಿದ್ದಾರೆ. ಪೂರ್ವ ಉಕ್ರೇನ್ ನಲ್ಲಿ ರಷ್ಯಾ ಬೆಂಬಲಿತ ಪ್ರತ್ಯೇಕವಾದಿಗಳು ರಷ್ಯಾದ ನೆರವನ್ನು ಕೋರಿದ ಬಳಿಕ ಉಕ್ರೇನ್ – ರಷ್ಯಾ ಬಿಕ್ಕಟ್ಟು ಉಲ್ಬಣಗೊಂಡಿದೆ.

ಈ ಮಧ್ಯೆ ಯುರೋಪಿಯನ್ ದೇಶಗಳು ರಷ್ಯಾ ನಡೆಸುತ್ತಿರುವ ದಾಳಿಯನ್ನು ಖಂಡಿಸಿದೆ ಮತ್ತು ಉಕ್ರೇನ್ ನಿಂದ ಪಲಾಯನ ಮಾಡುವ ನೂರಾರು ಮಂದಿಯನ್ನು ಸ್ವೀಕರಿಸಲು ಸಿದ್ಧತೆ ಆರಂಭಿಸಿದೆ.

ರಷ್ಯಾದೊಂದಿಗಿನ ಎಲ್ಲಾ ರಾಜತಾಂತ್ರಿಕ ಸಂಬಂಧಗಳನ್ನು ಕಡಿತಗೊಳಿಸಿದೆ ಎಂದು ಉಕ್ರೇನ್ ಸ್ಪಷ್ಟಪಡಿಸಿದೆ.



Join Whatsapp