October 10, 2021

ರಷ್ಯಾದ ಟಾಟರ್ಸ್ತಾನ್ ಬಳಿ ವಿಮಾನ ಪತನ: 19 ಮಂದಿ ಸಾವು !

ಮಾಸ್ಕೋ: ರಷ್ಯಾದ ಟಾಟಾರ್ಸ್ತಾನದಲ್ಲಿ ವಿಮಾನವೊಂದು ಪತನವಾಗಿದ್ದು, 19 ಮಂದಿ ಸಾವನ್ನಪ್ಪಿದ್ದಾರೆ ಮತ್ತು ಇತರೆ 3 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ರಷ್ಯಾದ ಪ್ಯಾರಾಟ್ರೂಪರ್ ಗಳೊಂಗಿದೆ ಎಲ್ – 410 ವಿಮಾನ ಮೆಂಜೆಲಿನ್ಸ್ಕ್ ಪ್ರದೇಶದಲ್ಲಿ ಪತನಗೊಂಡಿದೆ ಎಂದು ಸ್ಥಳೀಯ ನಿವಾಸಿಗಳು ಖಚಿತ ಪಡಿಸಿದ್ದಾರೆ. ಪ್ರಸ್ತುತ ಈ ವಿಮಾನದಲ್ಲಿ 21 ಪ್ಯಾರಾಚೂಟಿಸ್ ಗಳು ಮತ್ತು ಇಬ್ಬರು ಸಿಬ್ಬಂದಿಗಳು ಸೇರಿದಂತೆ ಒಟ್ಟು 23 ಮಂದಿ ಪ್ರಯಾಣಿಸುತ್ತಿದ್ದರು.

ಈ ಮಧ್ಯೆ ಅಪಘಾತಕ್ಕೆ ನಿಖರ ಕಾರಣ ಪತ್ತೆಹಚ್ಚಲಾಗುತ್ತಿದ್ದು, ಅಗ್ನಿಶಾಮಕ ಮತ್ತು ತುರ್ತು ನಿರ್ವಹಣಾ ತಂಡ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದೆ.

ಘಟನೆಗೆ ಸಂಬಂಧಿಸಿದಂತೆ ಸ್ಥಳೀಯ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಿದ್ದಾರೆ.

ನಿಮ್ಮ ಚಂದಾ ಹಣ ಪಾವತಿಸಲು ಈ ಕೆಳಗಿನ ಬಟನ್ ಮೇಲೆ ಕ್ಲಿಕ್ ಮಾಡಿ.

ಜನಪರ ಪತ್ರಿಕೋದ್ಯಮವನ್ನು ಬೆಂಬಲಿಸಿ
ಪ್ರಸ್ತುತದ ಬೆಳವಣಿಗೆಯಲ್ಲಿ ಪಾಲುದಾರರಾಗಿ
ಜನಸಾಮಾನ್ಯರ ಜ್ವಲಂತ ಸಮಸ್ಯೆಗಳಿಗೆ ಸದಾ ಮಿಡಿಯುತ್ತಾ, ಧ್ವನಿ ಇಲ್ಲದ ಸಮುದಾಯಗಳ ಧ್ವನಿಯಾಗುತ್ತಾ ಮಾಧ್ಯಮ ಲೋಕದಲ್ಲಿ ಸ್ವತಂತ್ರವಾಗಿ ಕಾರ್ಯಾಚರಿಸುತ್ತಿರುವ ಪ್ರಸ್ತುತಕ್ಕೆ ನಿಮ್ಮ ಪ್ರೋತ್ಸಾಹ, ಬೆಂಬಲ ಯಾವತ್ತೂ ಇರಲಿ. ಪ್ರಸ್ತುತಕ್ಕೆ ದೇಣಿಗೆ ನೀಡಲು ಬಯಸುವವರು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಹಣವನ್ನು ಪಾವತಿಸಬಹುದು.

ಧನ್ಯವಾದಗಳು

ಟಾಪ್ ಸುದ್ದಿಗಳು

ವಿಶೇಷ ವರದಿ

error: Content is protected !!