ಅಬುಧಾಬಿ: ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಬುಧವಾರ ಯುಎಇಗೆ ಆಗಮಿಸಿದ್ದಾರೆ. ಅಧ್ಯಕ್ಷರನ್ನು ಭೇಟಿಯಾಗಿದ್ದಾರೆ ಎಂದು ಯುಎಇ ಸರಕಾರಿ ಸುದ್ದಿಸಂಸ್ಥೆ ವರದಿ ಮಾಡಿದೆ.
ರಷ್ಯಾ ಅಧ್ಯಕ್ಷರ ವಿಮಾನ ಅಬುಧಾಬಿಯಲ್ಲಿ ಲ್ಯಾಂಡ್ ಆಗಿದ್ದು, ಅಲ್ಲಿ ಯುಎಇ ಉನ್ನತ ಅಧಿಕಾರಿಗಳು ಬರಮಾಡಿಕೊಂಡಿದ್ದಾರೆ ಎಂದು ವರದಿಯಲ್ಲಿ ಹೇಳಲಾಗಿದೆ.
ಬಳಿಕ ಖಾಸರ್ ಅಲ್ವತನ್ನಲ್ಲಿ ಕಾರ್ಯಕ್ರಮ ನಡೆಯಿತು. ಅದರಲ್ಲಿ ಯುಎಇ ಅಧ್ಯಕ್ಷ ಶೇಖ್ ಮುಹಮ್ಮದ್ ಅವರು ಪುಟಿನ್ರನ್ನು ಹಾರ್ದಿಕವಾಗಿ ಸ್ವಾಗತಿಸಿದರು ಎಂದು ರಷ್ಯಾದ ಸುದ್ದಿಸಂಸ್ಥೆ ವರದಿ ಮಾಡಿದೆ.