ಮಾಸ್ಕೋ: ಅಮೆರಿಕದ ಅಧ್ಯಕ್ಷೀಯ ಚುನಾವಣೆಯಲ್ಲಿ ಕಮಲಾ ಹ್ಯಾರಿಸ್ ಅವರನ್ನು ಬೆಂಬಲಿಸುವುದಾಗಿ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಹೇಳಿದ್ದಾರೆ. ಅಮೆರಿಕ ಅಧ್ಯಕ್ಷ ಜೋ ಬೈಡೆನ್ ಅವರು ಕಮಲಾ ಹ್ಯಾರಿಸ್ ಅವರನ್ನು ಬೆಂಬಲಿಸುವಂತೆ ಮತದಾರರಿಗೆ ಶಿಫಾರಸು ಮಾಡಿದ್ದನ್ನು ನಾವು ಕೂಡ ಬೆಂಬಲಿಸುತ್ತೇವೆ ಎಂದು ಪುಟಿನ್ ಹೇಳಿದ್ದಾರೆ.
ಬಹುಶಃ ಇದರರ್ಥ ಅವರು ರಷ್ಯಾ ವಿರುದ್ಧದ ನಿರ್ಬಂಧಗಳನ್ನು ತಪ್ಪಿಸುತ್ತಾರೆ ಎಂದು ಹೇಳಿದ್ದಾರೆ.
ಡೊನಾಲ್ಡ್ ಟ್ರಂಪ್ ಅವರು ಅಧ್ಯಕ್ಷರಾಗಿದ್ದ ಅವಧಿಯಲ್ಲಿ ರಷ್ಯಾದ ಮೇಲೆ ಗರಿಷ್ಠ ನಿರ್ಬಂಧಗಳನ್ನು ವಿಧಿಸಿದ್ದಾರೆ. ಆದಾಗ್ಯೂ, ಅಂತಿಮವಾಗಿ ಚುನಾವಣೆಯ ನಿರ್ಧಾರವು ಅಮೆರಿಕಾದ ಜನರ ಕೈಯಲ್ಲಿದೆ. ನಾವು ಆ ನಿರ್ಧಾರವನ್ನು ಗೌರವಿಸುತ್ತೇವೆ ಎಂದು ಹೇಳಿದ್ದಾರೆ.