Home ಕರಾವಳಿ SDPI ಮಂಗಳೂರು ವಿಧಾನಸಭಾ ಕ್ಷೇತ್ರ ಸಮಿತಿಯ ನೂತನ ಅಧ್ಯಕ್ಷರಾಗಿ ಎಸ್. ಎಮ್. ಬಷೀರ್ ಆಯ್ಕೆ

SDPI ಮಂಗಳೂರು ವಿಧಾನಸಭಾ ಕ್ಷೇತ್ರ ಸಮಿತಿಯ ನೂತನ ಅಧ್ಯಕ್ಷರಾಗಿ ಎಸ್. ಎಮ್. ಬಷೀರ್ ಆಯ್ಕೆ

ಉಳ್ಳಾಲ: ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಮಂಗಳೂರು (ಉಳ್ಳಾಲ) ವಿಧಾನಸಭಾ ಕ್ಷೇತ್ರ ಸಮಿತಿಗೆ ನೂತನ ಅಧ್ಯಕ್ಷರಾಗಿ ಎಸ್. ಎಮ್. ಬಷೀರ್ ಆಯ್ಕೆಯಾಗಿದ್ದಾರೆ

ಕ್ಷೇತ್ರ ಸಮಿತಿಯ ಉಪಾಧ್ಯಕ್ಷ ಫಾರೂಕ್ ಅದ್ಯಕ್ಷತೆಯಲ್ಲಿ, ದೇರಳಕಟ್ಟೆಯ ಪಕ್ಷದ ಕಚೇರಿಯಲ್ಲಿ ಶುಕ್ರವಾರ ನಡೆದ ಅಸೆಂಬ್ಲಿ ಸಮಿತಿಯ ವಿಶೇಷ ಸಭೆಯಲ್ಲಿ ವೀಕ್ಷಕರಾಗಿ ಭಾಗವಹಿಸಿದ SDPI ರಾಷ್ಟ್ರೀಯ ಕಾರ್ಯದರ್ಶಿ ರಿಯಾಝ್ ಫರಂಗಿಪೇಟೆ ಹಾಗೂ ಜಿಲ್ಲಾಧ್ಯಕ್ಷ ಅನ್ವರ್ ಸಾದತ್ ಇವರ ಉಪಸ್ಥಿತಿಯಲ್ಲಿ ಬಷೀರ್‌ರನ್ನು ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ. ಅಲ್ಲದೆ, ಅಸೆಂಬ್ಲಿ ಸಮಿತಿಗೆ ನೂತನ ನಾಮ ನಿರ್ದೇಶಿತ ಸದಸ್ಯರಾಗಿ ಹಕೀಮ್ ಕೆ ಸಿ ರೋಡ್ ರವರನ್ನು ಆಯ್ಕೆ ಮಾಡಲಾಗಿದೆ.

ಈ ಸಂದರ್ಭದಲ್ಲಿ ಕ್ಷೇತ್ರ ಕಾರ್ಯದರ್ಶಿ ಅಶ್ರಫ್ ಮಂಚಿ, ಜೊತೆ ಕಾರ್ಯದರ್ಶಿ ಉಬೈದ್ ಅಮೆಂಬಳ, ಕೋಶಾಧಿಕಾರಿ ರವೂಫ್ ಉಳ್ಳಾಲ ಹಾಗೂ ಇತರ ಸಮಿತಿ ಸದಸ್ಯರು ಮತ್ತು ವಿವಿಧ ಬ್ಲಾಕ್ ಸಮಿತಿ ಅಧ್ಯಕ್ಷರು ಉಪಸ್ಥಿತರಿದ್ದರು.

Join Whatsapp
Exit mobile version