ಮಂಗಳೂರು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು ಉಜಿರೆಯ ಮಾಜಿ ಪ್ರಾಂಶುಪಾಲ, ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ.ಬಿ.ಯಶೋವರ್ಮ(66) ಅನಾರೋಗ್ಯದಿಂದ ರವಿವಾರ ಮಧ್ಯರಾತ್ರಿ ಸಿಂಗಾಪುರದಲ್ಲಿ ವಿಧಿವಶರಾಗಿದ್ದಾರೆ.
66 ವರ್ಷದ ಯಶೋವರ್ಮ ಅವರು ಕಳೆದ ಕೆಲವು ತಿಂಗಳಿನಿಂದ ಅನಾರೋಗ್ಯದ ಹಿನ್ನೆಲೆಯಲ್ಲಿ ಸಿಂಗಾಪುರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಭಾನುವಾರ ಮಧ್ಯರಾತ್ರಿ ಚಿಕಿತ್ಸೆ ಫಲಿಸದೆ ನಿಧನರಾಗಿದ್ದಾರೆ.
ಡಾ. ಬಿ.ಯಶೋವರ್ಮ ಅವರು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆಯವರ ಪತ್ನಿ ಡಾ. ಹೇಮಾವತಿ ಹೆಗ್ಗಡೆಯವರ ಸಹೋದರರಾಗಿದ್ದಾರೆ.