ಮಾಲೆಂಗಾವ್ ಸ್ಪೋಟದ ಆರೋಪಿ ಸಾದ್ವಿ ಪ್ರಜ್ಞಾ ಸಿಂಗ್ ಮತ್ತೆ ಆಸ್ಪತ್ರೆಗೆ ದಾಖಲು । ತಿಂಗಳೊಳಗೆ ಇದು ಮೂರನೇ ಬಾರಿ !

Prasthutha: March 6, 2021

ಮಾಲೆಂಗಾವ್ ಸ್ಪೋಟದ ಪ್ರಮುಖ ಆರೋಪಿ ಮತ್ತು ಭೋಪಾಲ್ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರನ್ನು ತೀವ್ರ ಉಸಿರಾಟದ ತೊಂದರೆಯಿಂದ ಮರಳಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಒಂದು ತಿಂಗಳೊಳಗೆ ಇದು ಮೂರನೇಯ ಬಾರಿ ಪ್ರಜ್ಞಾ ಸಿಂಗ್ ಅವರನ್ನು ಆಸ್ಪತ್ರೆಗೆ ದಾಖಲು ಮಾಡುತ್ತಿದ್ದು, ಚಿಕಿತ್ಸೆಗಾಗಿ ಇಂದು ಮುಂಬೈಗೆ ವಿಮಾನದಲ್ಲಿ ಕರೆದೊಯ್ಯಲಾಗಿದೆ. ಮುಂಬೈನ ಕೋಕಿಲಾಬೆನ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ. ಮೊದಲು ಕೋವಿಡ್ ಗುಣಲಕ್ಷಣ ಕಂಡುಬಂದ ಹಿನ್ನಲೆಯಲ್ಲಿ ನವದೆಹಲಿಯ ಆಲ್ ಇಂಡಿಯಾ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ (ಏಮ್ಸ್) ಗೆ ಕರೆದೊಯಲಾಗಿತ್ತು. ಫೆಬ್ರವರಿ 19 ಕ್ಕೆ ಎರಡನೇ ಬಾರಿ ದಾಖಲು ಮಾಡಲಾಗಿದೆ. ಈಗ ಮತ್ತೊಮ್ಮೆ ತೀವ್ರ ಉಸಿರಾಟದ ತೊಂದರೆಯಿಂದ ಸಂಸದೆ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದು ಬಂದಿದೆ.

2008 ರ ಮಾಲೆಗಾಂವ್ ಬಾಂಬ್ ಸ್ಫೋಟದಲ್ಲಿ 10 ಜನರು ಸಾವನ್ನಪ್ಪಿದರು ಮತ್ತು ಹಲವಾರು ಮಂದಿ ಗಾಯಗೊಂಡಿದ್ದರು. ಆ ಪ್ರಕರಣದ ಪ್ರಮುಖ ಆರೋಪಿ ಪ್ರಜ್ಞಾ ಸಿಂಗ್ ಅವರಿಗೆ ಆರೋಗ್ಯ ಕಾರಣಗಳಿಗಾಗಿ ರಾಷ್ಟ್ರೀಯ ತನಿಖಾ ಸಂಸ್ಥೆ 2017 ರಲ್ಲಿ ಜಾಮೀನು ನೀಡಿತ್ತು. ಭಯೋತ್ಪಾದಕ ಪ್ರಕರಣದ ಆರೋಪಿರೋರ್ವ ಭಾರತದ ಸಂಸದನಾಗಿರುವುದು ಇದೇ ಮೊದಲಾಗಿದೆ.

ನಿಮ್ಮ ಚಂದಾ ಹಣ ಪಾವತಿಸಲು ಈ ಕೆಳಗಿನ ಬಟನ್ ಮೇಲೆ ಕ್ಲಿಕ್ ಮಾಡಿ.

ಜನಪರ ಪತ್ರಿಕೋದ್ಯಮವನ್ನು ಬೆಂಬಲಿಸಿ
ಪ್ರಸ್ತುತದ ಬೆಳವಣಿಗೆಯಲ್ಲಿ ಪಾಲುದಾರರಾಗಿ
ಜನಸಾಮಾನ್ಯರ ಜ್ವಲಂತ ಸಮಸ್ಯೆಗಳಿಗೆ ಸದಾ ಮಿಡಿಯುತ್ತಾ, ಧ್ವನಿ ಇಲ್ಲದ ಸಮುದಾಯಗಳ ಧ್ವನಿಯಾಗುತ್ತಾ ಮಾಧ್ಯಮ ಲೋಕದಲ್ಲಿ ಸ್ವತಂತ್ರವಾಗಿ ಕಾರ್ಯಾಚರಿಸುತ್ತಿರುವ ಪ್ರಸ್ತುತಕ್ಕೆ ನಿಮ್ಮ ಪ್ರೋತ್ಸಾಹ, ಬೆಂಬಲ ಯಾವತ್ತೂ ಇರಲಿ. ಪ್ರಸ್ತುತಕ್ಕೆ ದೇಣಿಗೆ ನೀಡಲು ಬಯಸುವವರು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಹಣವನ್ನು ಪಾವತಿಸಬಹುದು.

ಧನ್ಯವಾದಗಳು

ಟಾಪ್ ಸುದ್ದಿಗಳು

ವಿಶೇಷ ವರದಿ

error: Content is protected !!