Home ಟಾಪ್ ಸುದ್ದಿಗಳು ಶಬರಿಮಲೆ ಯಾತ್ರಾರ್ಥಿಗಳ ಬಸ್-ಆಟೋ ಮಧ್ಯೆ ಅಪಘಾತ: ಐವರು ಮೃತ್ಯು

ಶಬರಿಮಲೆ ಯಾತ್ರಾರ್ಥಿಗಳ ಬಸ್-ಆಟೋ ಮಧ್ಯೆ ಅಪಘಾತ: ಐವರು ಮೃತ್ಯು

ಮಲಪ್ಪುರಂ: ಶಬರಿಮಲೆ ಯಾತ್ರಾರ್ಥಿಗಳ ಬಸ್ ಗೆ ಆಟೋ ಡಿಕ್ಕಿ ಹೊಡೆದ ಪರಿಣಾಮ ಆಟೋ ಚಾಲಕ ಹಾಗೂ ಆಟೋದಲ್ಲಿದ್ದ ನಾಲ್ವರು ಪ್ರಯಾಣಿಕರು ಸೇರಿದಂತೆ ಐವರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಮಂಚೇರಿಯಲ್ಲಿ ಶುಕ್ರವಾರ ಸಂಜೆ ಸುಮಾರು 6 ಗಂಟೆಗೆ ಸಂಭವಿಸಿದೆ.

ಶಬರಿಮಲೆ ಯಾತ್ರಿಕರನ್ನು ಹೊತ್ತೊಯ್ಯುತ್ತಿದ್ದ ಕರ್ನಾಟಕ ಬಸ್ ಮತ್ತು ಆಟೋ ಮಧ್ಯೆ ಅಪಘಾತವಾಗಿದೆ. ಆಟೋ ಚಾಲಕ ಮಜೀದ್, ವಾಹನದಲ್ಲಿದ್ದ ಇಬ್ಬರು ಮಹಿಳೆಯರು ಹಾಗೂ ಇಬ್ಬರು ಮಕ್ಕಳು ಸೇರಿದಂತೆ ಐವರು ಸಾವನ್ನಪ್ಪಿದ್ದಾರೆ. ಮೃತ ದೇಹಗಳನ್ನು ಮಂಚೇರಿ ವೈದ್ಯಕೀಯ ಕಾಲೇಜಿನಲ್ಲಿ ಇರಿಸಲಾಗಿದೆ.

Join Whatsapp
Exit mobile version