ಉತ್ತರ ಪ್ರದೇಶ: ಹಳಿ ತಪ್ಪಿದ ಸಬರಮತಿ ಎಕ್ಸ್’ಪ್ರೆಸ್ ರೈಲು

Prasthutha|

ಕಾನ್ಪುರ: ಇಂದು (ಆ.17) ಮುಂಜಾನೆ ಉತ್ತರ ಪ್ರದೇಶದ ಕಾನ್ಪುರದ ಗೋವಿಂದಪುರಿ ನಿಲ್ದಾಣದ ಬಳಿ ಸಬರಮತಿ ಎಕ್ಸ್ಪ್ರೆಸ್ ಪ್ಯಾಸೆಂಜರ್ ರೈಲಿನ 20 ಬೋಗಿಗಳು ಹಳಿತಪ್ಪಿವೆ. ಆದರೆ ಘಟನೆಯಿಂದ ಯಾವುದೇ ಸಾವು-ನೋವುಗಳು ಸಂಭವಿಸಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ.

- Advertisement -


ಇನ್ನು ಈ ಬಗ್ಗೆ ನಾರ್ತ್ ಸೆಂಟ್ರಲ್ ರೈಲ್ವೇ ಹಿರಿಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಶಶಿಕಾಂತ್ ತ್ರಿಪಾಠಿ ಮಾಹಿತಿ ನೀಡಿದ್ದಾರೆ. ಮುಂಜಾನೆ 2.30 ಕ್ಕೆ ಅಪಘಾತ ಸಂಭವಿಸಿದ್ದು, ಯಾವುದೇ ಪ್ರಾಣ ಹಾನಿ ಅಥವಾ ಆಸ್ತಿ ನಷ್ಟದ ಬಗ್ಗೆ ವರದಿಯಾಗಿಲ್ಲ ಎಂದು ಹೇಳಿದ್ದಾರೆ.



Join Whatsapp